Sunday, March 26, 2023
spot_img
- Advertisement -spot_img

ಪ್ರದೀಪ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ ಎಫ್ ಐ ಆರ್

ರಾಮನಗರ: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ 6 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನ ದಕ್ಷಿಣ ತಾಲೂಕು ನೆಟ್ಟಗೆರೆ ಬಳಿ ತಮ್ಮ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೊಸ ವರ್ಷಾಚರಣೆಗೆ ನೆಟ್ಟಗೆರೆ ಬಳಿ ಇರುವ ರೆಸಾರ್ಟ್‌ಗೆ ಬಂದಿದ್ದ ಪ್ರದೀಪ್ ರಾತ್ರಿ ಪಾರ್ಟಿ ಮಾಡಿ, ಬೆಳಗ್ಗೆ ಶಿರಾಗೆ ಹೋಗಬೇಕು ಎಂದು ಹೇಳಿ ಬೆಂಗಳೂರಿನಲ್ಲಿನ ತಮ್ಮ ನಿವಾಸಕ್ಕೆ ಹೋಗಿ ಡೆತ್ ನೋಟ್ ಬರೆದಿದ್ದಾರೆ. ಬಳಿಕ ರೆಸಾರ್ಟ್‌ಗೆ ವಾಪಸ್ ಬರುವಾಗ ಕಾರಿನಲ್ಲೆ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಅರವಿಂದ ಲಿಂಬಾವಳಿ, ಗೋಪಿ, ರಘು ಭಟ್, ಸೋಮಯ್ಯ, ರಮೇಶ್ ರೆಡ್ಡಿ ಹಾಗೂ ಜಯರಾಮ್ ಎಂದು ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಬಳಿ ರೆಸಾರ್ಟ್ ತೆರೆಯಲು ಒಂದೂವರೆ ಕೋಟಿ ರೂ. ಪಡೆದುಕೊಂಡಿದ್ದರು. ನನ್ನನ್ನು ಪಾಲುದಾರನನ್ನಾಗಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಮನೆ ಮಾರಿದ್ದೆ. ಪಾಲುದಾರಿಕೆ ಹೆಸರಿನಲ್ಲಿ ನನಗೆ ಮೋಸ ಮಾಡಿದ್ದು, ಎರಡೂವರೆ ಕೋಟಿ ಹಣ ನನಗೆ ಬರಬೇಕು ಎಂದು ಬರೆದಿದ್ದಾರೆ.

ಈ ಮಧ್ಯೆ ರಾಜೀ ಮಾಡೋ ಪ್ರಯತ್ನವಾದ್ರೂ ಸರಿಯಾದ ನೆರವು ನನಗೆ ಆಗಿಲ್ಲ ಹೀಗಾಗಿ 6 ಜನರಿಗೆ ಶಿಕ್ಷೆ ಆಗಬೇಕು ಎಂದು ಪ್ರದೀಪ್ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

Related Articles

- Advertisement -

Latest Articles