Sunday, October 1, 2023
spot_img
- Advertisement -spot_img

ಸನಾತನ ಧರ್ಮ ವಿವಾದ : ಉದಯನಿಧಿ ವಿರುದ್ಧ ದಾಖಲಾಯ್ತು ಮತ್ತೊಂದು ಎಫ್‌ಐಆರ್

ಹುಬ್ಬಳ್ಳಿ : ಸನಾತನ ಧರ್ಮದ ಕುರಿತು ತಮಿಳುನಾಡಿನ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಯ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಹಿಂದು ಜಾಗರಣ ವೇದಿಕೆ ಮುಖಂಡ‌ ಹಾಗೂ ವಕೀಲ ಗಣೇಶ ಜಿತೂರಿ ಎಂಬುವವರ ದೂರಿನನ್ವಯ ಐಪಿಸಿ ಸೆಕ್ಷನ್ 153 ಎ, 153 ಬಿ, 295ರಡಿ ಇಲ್ಲಿನ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ : ‘ಹೆಸರಲ್ಲ ಮೊದಲು ದೇಶದ ಹಣೆಬರಹ ಚೇಂಜ್ ಮಾಡಿ’

ಚೆನೈನಲ್ಲಿ ಆಯೋಜಿಸಿದ್ದ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘದ ಸಭೆಯಲ್ಲಿ ಸಚಿವ ಸ್ಟಾಲಿನ್ ನೀಡಿರುವ ವಿಷಕಾರಿ ಹೇಳಿಕೆಯಲ್ಲಿ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾ, ಕರೊನಾ ಸೋಂಕಿಗೆ ಹೋಲಿಸಿರುವುದು ಸರಿಯಲ್ಲ. ಅವರು ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ಕದಡುತ್ತಿದ್ದಾರೆ. ಕೋಮುಸೌಹಾರ್ದತೆಯನ್ನು ಪ್ರಚೋದಿಸಿದ್ದಾರೆ ಎಂದು ಜಿತೂರಿ ಆರೋಪಿಸಿದ್ದಾರೆ

ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಉದಯನಿಧಿ ಸ್ಟಾಲಿನ್ ವಿರುದ್ಧ ಕೂಡಲೇ ಕಠಿಣ ಕಾನೂನು ಜರುಗಿಸಬೇಕೆಂದು ಹಿಂದು ಜಾಗರಣ ವೇದಿಕೆ ಸಂಚಾಲಕ ವಿಶ್ವನಾಥ ಬೂದೂರ, ಸು. ಕೃಷ್ಣಮೂರ್ತಿ, ಶ್ರೀಧರ ಕಲಬುರ್ಗಿ, ಯಶೋಧಾ ತಾಂಬೆ ಸೇರಿದಂತೆ ಇತರರು ಸೇರಿ ದೂರು ನೀಡಿದ್ದಾರೆ.

ಉದಯನಿಧಿ ಹೇಳಿದ್ದೇನು.?

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಸಿದ ನಂತರ ರಾಜಕೀಯ ವಲಯದಲ್ಲಿ ವಾಗ್ವಾದಗಳು ನಡೆದಿವೆ. ಚೆನ್ನೈನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ಇಂತಹ ವಿಷಯಗಳನ್ನು ವಿರೋಧಿಸಬಾರದು. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles