ಹಾವೇರಿ: ಚುನಾವಣೆ ಹಿನ್ನಲೆ ಮತದಾರರಿಗೆ ಆಮಿಷವೊಡ್ಡಿದ ಪ್ರಕರಣ ಸಂಬಂಧ ಎಂಎಲ್ಸಿ ಶಂಖರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚುನಾವಣೆ ಹಿನ್ನಲೆ ಕುಕ್ಕರ್, ಸೀರೆ ಹಂಚಿಕೆ ಮಾಡಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ದೂರು ಸಲ್ಲಿಸಲಾಗಿದೆ.
ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆ ಮೇಲೆ ಮಾರ್ಚ್ 14ರಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿತ್ತು. ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟ ಹಾಗೂ ಎಲ್.ಕೆ.ಜಿ ಪದವಿ ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿದ್ದವು
ಆರ್. ಶಂಕರ್ ಕಚೇರಿಯಲ್ಲಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸೀರೆ, ತಟ್ಟೆ, ಮಕ್ಕಳ ಸ್ಕೂಲ್ ಬ್ಯಾಗ್ಗಳಿಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಕಚೇರಿ ಒಳಗೆ ಯಾರೂ ಹೋಗದಂತೆ ಶಹರ ಠಾಣೆ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ.