ಬೆಂಗಳೂರು: ಮತದಾರರಿಗೆ ಸೀರೆ ಹಂಚುತ್ತಿದ್ದ ಆರೋಪದಡಿ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮುನಿರತ್ನ ಬೆಂಬಲಿಗರು ಸೀರೆ ಹಂಚುತ್ತಿದ್ದ ಆಪಾದನೆಯಡಿ ಚುನಾವಣಾ ಆಯೋಗದ ಅಧಿಕಾರಿ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿಂದೆ ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಶಾಸಕ ಮುನಿರತ್ನ ಹೇಳಿಕೆ ನೀಡಿದ್ದ ಹಿನ್ನೆಲೆ ಕೋಮುದ್ವೇಷ ಪ್ರಚೋದಿತ ಭಾಷಣದ ಬಗ್ಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿದ್ದರು.
ಅಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮುನಿರತ್ನ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಅದನ್ನೂ ಪುರಾವೆಯಾಗಿ ಪರಿಗಣಿಸಲಾಗಿದೆ. ಮುನಿರತ್ನ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ, ಈಗ ಮುನಿರತ್ನ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ.