ಶಿವಮೊಗ್ಗ: ಆ. 31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಮಾಡಲಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಲೆನಾಡಿಗರ ಕನಸು ನನಸಾಗುತ್ತಿದೆ. ಇದೊಂದು ಐತಿಹಾಸಿಕ ಕ್ಷಣವಾಗಿರಲಿದೆ. ಆ.31ರಿಂದ ವಿಮಾನ ಹಾರಾಟ ನಡೆಸಲಿವೆ ಎಂದಿದ್ದಾರೆ.
ದೇಶದ ಬೇರೆ ವಿಮಾನ ನಿಲ್ದಾಣಗಳು ನಿರ್ಮಾಣ ಆಗಿ ಎರಡು ಮೂರು ವರ್ಷಗಳ ನಂತರ ವಿಮಾನ ಹಾರಾಟ ಮಾಡುತ್ತಿತ್ತು, ಆದರೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣ ಆಗಿ ಕೇವಲ 6 ತಿಂಗಳಲ್ಲಿ ವಿಮಾನ ಹಾರಾಟ ಆರಂಭವಾಗುತ್ತಿದೆ ಎಂದರು.
ಇದನ್ನೂ ಓದಿ: 5 ರೂ. ಕೊಟ್ಟು ಕಾಂಗ್ರೆಸ್ ಸದಸ್ಯತ್ವ ಪಡೆದ ಆಯನೂರು
ಆ.31ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬೆಳಗ್ಗೆ 9:50ಕ್ಕೆ ಬೆಂಗಳೂರಿನಿಂದ ವಿಮಾನ ಹೊರಡಲಿದೆ. ಆ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 11.05ಕ್ಕೆ ಲ್ಯಾಂಡಿಂಗ್ ಆಗಲಿದೆ. ಅವರೊಂದಿಗೆ ಸರ್ಕಾರದ ಸಚಿವರುಗಳು ಆಗಮಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗುವುದರಲ್ಲಿ ಅನುಮಾನವಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ‘ದಿನದಿಂದ ದಿನಕ್ಕೆ ಬಿಜೆಪಿ ಕುಗ್ಗುತ್ತಿದೆ, ನಾಯಕನಿಲ್ಲದೆ ಸೊರಗುತ್ತಿದೆ’
ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ವಿಮಾನಯಾನಕ್ಕೆ ಅನುಮತಿ ಪಡೆದುಕೊಂಡಿರುವ ಇಂಡಿಗೋ ಸಂಸ್ಥೆಯು ಜು.26ರಿಂದ ಟಿಕೆಟ್ ಬುಕಿಂಗ್ ಆರಂಭಿಸಿದೆ. 3,999 ರೂ. ಇದ್ದ ಆರಂಭಿಕ ದರ 5,900 ರೂ., 6,900 ರೂ., 7,300 ರೂ. ವರೆಗೆ ಏರಿಕೆಯಾಗಿದೆ. ಈ ನಡುವೆ ಮೊದಲ ದಿನದ ಟಿಕೆಟ್ ಫುಲ್ ಬುಕ್ ಆಗಿದೆ. 78 ಸೀಟುಗಳಲ್ಲಿ ಬೆಂಗಳೂರಿನಿಂದ ಶಿವಮೊಗ್ಗಕ್ಕೆ 72 ಸೀಟ್‌ಗಳು ಬುಕ್ ಆಗಿವೆ. ಶಿವಮೊಗ್ಗದಿಂದ ಬೆಂಗಳೂರಿಗೆ 62 ಸೀಟುಗಳನ್ನು ಕಾಯ್ದಿರಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.