ಬೆಂಗಳೂರು : ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಲೆನಾಡಿಗೆ ಮೊದಲ ದೇಶಿಯ ವಿಮಾನ ಹಾರಾಟ ನಡೆಸಲಿದ್ದು, ಈ ವಿಮಾನದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಸಚಿವ ಎಂ.ಬಿ ಪಾಟೀಲ್ ಪ್ರಯಾಣ ಬೆಳೆಸಲಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಆರಂಭಗೊಳ್ಳಲಿರುವ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಸಂತಸ, ವ್ಯಕ್ತಪಡಿಸಿದರು. ಡಾಲರ್ಸ್ ಕಾಲೊನಿ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆಗಲು ರೈತರು ಕಾರಣ. ಸಣ್ಣ ತಕರಾರು ಇಲ್ಲದೆ ರೈತರು ಜಮೀನು ಬಿಟ್ಟುಕೊಟ್ಟರು. ನನ್ನ ಜೊತೆ ಕೆಲ ರೈತರನ್ನೂ ವಿಮಾನದಲ್ಲಿ ಕರೆದುಕೊಂಡು ಹೋಗ್ತೇನೆ ಎಂದರು. ರೈತರಿಗೆ ಧನ್ಯವಾದ ಹೇಳಿದರು. ವಿಮಾನ ನಿಲ್ದಾಣದ ನಿರ್ಮಾಣದ ಹಿಂದೆ ಸಂಸದ ಬಿ.ವೈ ರಾಘವೇಂದ್ರ ಅವರ ಅಪಾರ ಶ್ರಮವಿದೆ ಎಂದರು.
ವಿಧಾನಸಭಾ ಚುನಾವಣೆಗೂ ಮುನ್ನ ಅಂದರೆ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದರು. ಆದರೆ, ಇದುವರೆಗೆ ವಿಮಾನಗಳ ಹಾರಾಟ ಪ್ರಾರಂಭಗೊಂಡಿರಲಿಲ್ಲ. ಇಂದಿನಿಂದ ಶಿವಮೊಗ್ಗ- ಬೆಂಗಳೂರು ನಡುವಿನ ವಿಮಾನ ಹಾರಾಟ ಶುರುವಾಗಲಿದೆ. ಈ ಮೂಲಕ ಮಲೆನಾಡಿಗರ ಬಹುಕಾಲದ ಬೇಡಿಕೆ ಈಡೇರಲಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.