Wednesday, November 29, 2023
spot_img
- Advertisement -spot_img

‘ಚೈತ್ರಾ ಕುಂದಾಪುರ ಕೇಸ್‌ನಲ್ಲಿರುವ ಎಲ್ಲರಿಗೂ ಉಗ್ರ ಶಿಕ್ಷೆಯಾಗಲಿ’

ಮಂಗಳೂರು : ಬಿಜೆಪಿಗೂ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಇಡೀ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಲಿ. ಇದರ ಹಿಂದೆ ಯಾರೆಲ್ಲಾ ಇದ್ದಾರೋ ಅವರೆಲ್ಲರಿಗೂ ಉಗ್ರ ಶಿಕ್ಷೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಹಿಂದೆ ಯಾರೆಲ್ಲ ಇದ್ದಾರೋ ಅವರೆಲ್ಲರ ಪಾತ್ರವೂ ಹೊರಬರಲಿ. ಯಾರೇ ಇದ್ದರೂ ಅವರ ಬಂಧನ ಆಗಬೇಕು. ಬಿಜೆಪಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲವೆನ್ನುವುದು ಬಹಳ ಸ್ಪಷ್ಟವಿದೆ. ತನಿಖೆಯಲ್ಲಿ ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ಯಾದಗಿರಿಗಿದೆಯಾ ಉಗ್ರರ ನಂಟು? : ಎನ್‌ಐಎ ತಂಡದಿಂದ ಭೇಟಿ

ಟಕೆಟ್ ಕೊಡಿಸುವುದಾಗಿ ಹೇಳಿ ಹಣ ಪಡೆದಿರುವುದನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬೇರೆ, ಬೇರೆ ಸಂಘಟನೆಗಳು ಹಿಂದುತ್ವದ ಪರವಾಗಿ ಹೋರಾಟಗಳನ್ನು ಮಾಡುತ್ತವೆ. ಆದರೆ ಹಿಂದುತ್ವ ಎಂದಾಕ್ಷಣ ಅದಕ್ಕೂ ಬಿಜೆಪಿಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ. ಅಪರಾಧ ಕೃತ್ಯ ಎಸಗಿ ಸಿಕ್ಕಿಬಿದ್ದ ಬಳಿಕ ದೊಡ್ಡ, ದೊಡ್ಡವರ ಹೆಸರು ಹೇಳುವುದು ಸಹಜ. ಆದರೆ ತನಿಖೆಯಿಂದ ಎಲ್ಲಾ ವಿಚಾರಗಳು ಹೊರಬರಲಿವೆ ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆಯ ವಿಷಯದಲ್ಲಿ ಟಿಕೆಟ್ ಹಂಚಿಕೆ, ಕ್ಷೇತ್ರದ ಹಂಚಿಕೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ.ಈ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಬಹುತೇಕ ಸಂಸತ್ ಅಧಿವೇಶನ ಮುಗಿದ ಬಳಿಕ ಇದರ ಬಗ್ಗೆ ವರಿಷ್ಠರು ಚರ್ಚಿಸಿ ನಮ್ಮೆಲ್ಲರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರಾಗಿ ಕುಮಾರಸ್ವಾಮಿಯವರನ್ನೇ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ, ನನ್ನ ಪ್ರಕಾರ ಅಂತಹ ವಿಚಾರವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಂದಾಗಿ ನಾವು ವಿರೋಧಪಕ್ಷಗಳನ್ನು ಎದುರಿಸಿ ಹೆಚ್ಚು ಸೀಟ್ ಪಡೆದುಕೊಳ್ಳಬೇಕೆನ್ನುವುದು ಪ್ರಮುಖ ವಿಚಾರವಾಗಿದೆ ಎಂದು ತಿಳಿಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles