Sunday, September 24, 2023
spot_img
- Advertisement -spot_img

‘ಸರ್ಕಾರದ ವಿರುದ್ಧ ಧ್ವನಿ ಎತ್ತುವವರನ್ನು ಹತ್ತಿಕ್ಕಲಾಗುತ್ತಿದೆ’

ಹುಬ್ಬಳ್ಳಿ : ರಾಜ್ಯದಲ್ಲಿ ಮುಂಗಾರು ಜೂನ್ ತಿಂಗಳ ಕೊನೆವರೆಗೂ ಬರಲಿಲ್ಲ, ಮಳೆ ಇಲ್ಲದೇ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಇದರಿಂದ ರೈತರಿಗೆ ಸಾಕಷ್ಟು ನಷ್ಟ ಆಗಿದೆ ಅದರ‌ ಬಗ್ಗೆ ಸರ್ಕಾರ ಯೋಚನೆ ಮಾಡಬೇಕು.ಆಗಸ್ಟ್ ನಲ್ಲಿ ಮಳೆ ಮತ್ತೆ ಬಂದಿಲ್ಲ ಈಗ ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಮೂರು ತಿಂಗಳಿಂದ ಬರಗಾಲ ಘೋಷಣೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳೆಗಳಿಗೆ ಹಾಗೂ ಕುಡಿಯುವ ನೀರಿನ ಬಗ್ಗೆ ಸರ್ಕಾರ ಯೋಚನೆ ಮಾಡಿಲ್ಲ. ಸರ್ಕಾರ ಕೂಡಲೇ ಬರಗಾಲ ಘೋಷಣೆ ಮಾಡುವ ಮೂಲಕ ಕುಡಿಯುವ ನೀರು, ಬೆಳೆ ಸಮೀಕ್ಷೆಯ ಜೊತೆಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ : ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಚಾರಣೆ ಮುಂದೂಡಿದ ಸುಪ್ರೀಂ!

ಮುಂದಿನ ದಿನಗಳಲ್ಲಿ ರಾಜ್ಯವು ತೀವ್ರ ಜಲ ಕ್ಷಾಮವನ್ನು ನೋಡಬೇಕಾಗುತ್ತದೆ. ನೀರಿನ ಕಡಿಮೆ ಪ್ರಮಾಣದಿಂದ ವಿದ್ಯುತ್ ಉತ್ಪಾದನೆಯ ಪ್ರಮಾಣ ತಗ್ಗುತ್ತಿರುವ ಹಿನ್ನೆಲೆಯಲ್ಲಿ ತೀವ್ರವಾಗಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ, ಆದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ ಎಂದು ಟೀಕಿಸಿದರು.

ವರ್ಗಾವಣೆ ದಂಧೆ ಸೇರಿದಂತೆ ಹಲವು ವಿಚಾರದಲ್ಲಿ ತಮ್ಮ ಸ್ವಹಿತಾಸಕ್ತಿಗಾಗಿ ಕಾಂಗ್ರೆಸ್ ನವರು ಬಡಿದಾಡುತ್ತಿರುವುದು ರಾಜ್ಯದ ದುಸ್ಥಿತಿಯಾಗಿದೆ ದೂರಿದರು.

ಅಲ್ಲದೆ ಸರ್ಕಾರದ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ದಮನ ಕಾರಿ ನೀತಿ ಅನುಸರಿಸುವ ಕೆಲಸ ನಡೆದಿದೆ. ಪತ್ರಕರ್ತರು ಶಾಸಕರ ಅಸಮಾಧಾನದ ಪತ್ರವನ್ನು ಹೊರ ತಂದರೆ ಅವರಿಗೂ ನೋಟಿಸ್ ನೀಡಲಾಗುತ್ತಿದೆ. ಪತ್ರಿಕಾ ಸ್ವಾತಂತ್ರ್ಯ ಧಮನ ಮಾಡುವ ಕೆಲಸ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.

ಕಾಂಗ್ರೆಸ್ ನವರಿಗೆ ಭಯ ಹುಟ್ಟಿಕೊಂಡಿದೆ. ಲೋಕಸಭಾ ಚುನಾವಣೆಯ ಸಮೀಕ್ಷೆ ಬಂದ ನಂತರ ಸರ್ಕಾರದ ಅಸ್ತಿತ್ವದ ಪ್ರಶ್ನೆ ಬರುತ್ತದೆ. ಲೋಕಸಭೆಯಲ್ಲಿ ಹೆಚ್ಚುಸ್ಥಾನ ಬರದೇ ಇದ್ದಲ್ಲಿ ಅದರ ಪರಿಣಾಮ ನೇರವಾಗಿ ರಾಜ್ಯ ಸರ್ಕಾರದ ಮೇಲೆ ಬೀಳುತ್ತದೆ. ಹೀಗಾಗಿ ಆಪರೇಷನ್ ಹಸ್ತ ಮಾಡುತ್ತಿದ್ದಾರೆ. ಆದರೆ ಈ ಆಪರೇಶನ್ ಯಶಸ್ವಿ ಆಗುವುದಿಲ್ಲ ಎಂದು ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles