ಹಾವೇರಿ: ಸಿದ್ದರಾಮಯ್ಯ 1 ಮತ್ತು ಸಿದ್ದರಾಮಯ್ಯ 2 ಗೆ ಬಹಳಷ್ಟು ವ್ಯತ್ಯಾಸ ಇದೆ, ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆದಿದೆ, ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ತಾರೆ ಎನ್ನುವುದು ಸರ್ಕಾರದ ನೀತಿನಾ? ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಬಂದ್ಮೇಲೆ ಸಂಪೂರ್ಣ ಅಭಿವೃದ್ಧಿ ನಿಂತು ಹೋಗಿದೆ, ಬಿಜೆಪಿ ಶಾಸಕರು,ಮತಕ್ಷೇತ್ರಗಳ ಬಗ್ಗೆ ತಾರತಮ್ಯ ಮಾಡ್ತಿದ್ದಾರೆ, ಎಸ್ ಸಿ ಎಸ್ ಟಿ ಗೆ ಮೀಸಲಿಟ್ಟಿದ್ದ ಹಣ ಗ್ಯಾರಂಟಿಗೆ ಬಳಸುತ್ತಿದ್ದಾರೆ, ಈ ಸರ್ಕಾರ ರಿವರ್ಸ್ ಗೇರ್ ಸರ್ಕಾರ ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ : ಜಿ20ಗೆ ನನಗೆ ಆಹ್ವಾನ ಬಂದಿಲ್ಲ : ಮಲ್ಲಿಕಾರ್ಜುನ ಖರ್ಗೆ
ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮಾಡಬೇಕು, ಟಿಕೆಟ್ ವಿಚಾರದ ಬಗ್ಗೆ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡುತ್ತಾರೆ, ಶಿವಕುಮಾರ ಉದಾಸಿ ಜೊತೆಗೆ ಮಾತನಾಡಿದ್ದೇನೆ, ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುತ್ತೇನೆ ಎಂದು ಹೇಳಿಲ್ಲ ಎಂದು ಪ್ರತಿಕ್ರಿಯಿಸಿದರು.
ಲೋಕಸಭಾ ಚುನಾವಣೆಗೆ ಬೊಮ್ಮಾಯಿ ಸ್ಪರ್ಧಿಸ್ತಾರ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ನಿಲ್ಲುವ ಪ್ರಶ್ನೆ ಇಲ್ಲ, ಪಕ್ಷ ತೀರ್ಮಾನ ಮಾಡುತ್ತದೆ, ನಾನು ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಲ್ಲ, ದೇವೇಗೌಡರು, ಅಮಿತ್ ಶಾ ಭೇಟಿ ಸ್ವಾಗತಾರ್ಹ ಬರುವಂತಹ ದಿನಗಳಲ್ಲಿ ಸ್ಪಷ್ಟತೆ ಸಿಗಲಿದೆ, ಅನಿಷ್ಟ ಸರ್ಕಾರದ ವಿರುದ್ಧ ಹೋರಾಡಲು ಜಂಟಿಯಾಗಬೇಕಿದೆ ಜೆಡಿಎಸ್ ನವರು ಸಹ ಸ್ಪಷ್ಟತೆ ಹೇಳುತ್ತಿಲ್ಲ ಎಂದು ವಿವರಿಸಿದರು.
ಇನ್ನೂ ವಿಪಕ್ಷ ನಾಯಕನ ಆಯ್ಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ವಿಳಂಬ ಯಾಕೆ ಆಗ್ತಿದೆ ಅನ್ನೋದು ಗೊತ್ತಿಲ್ಲ, ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಒಟ್ಟಿಗೆ ಮಾಡುವ ಕಾರಣಕ್ಕೆ ವಿಳಂಬ ಆಗುತ್ತಿರಬಹುದು ಎಂದು ಉತ್ತರಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.