ಬೆಂಗಳೂರು: ಹಿಂದಿನ ಬಿಜೆಪಿ ಆಡಳಿತದಲ್ಲಿ 40 ಪರ್ಸೆಂಟ್ ಕಮಿಷನ್ ಇತ್ತು ಅನ್ನೋದನ್ನು ಸಾಕ್ಷಿ ಸಮೇತ ಸಾಬೀತುಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಹಿಂದಿನ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಅಕ್ರಮಗಳನ್ನು ತನಿಖೆ ನಡೆಸಿ, ಸತ್ಯ ಹೊರ ತರಿಸಲಿ, ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಅವರು ತನಿಖೆ ಮಾಡಲಿ. ಎಲ್ಲ ಪುರಾವೆಗಳೊಂದಿಗೆ 40 ಪರ್ಸೆಂಟ್ ಕಮಿಷನ್ ಇದೆ ಎಂದು ತೋರಿಸಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದು ಪ್ರತಿಕ್ರಿಯಿಸಿದರು.
ಮಳೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದರೂ, ಬಿಬಿಎಂಪಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿವೆ. ಅಲ್ಲದೆ, ಮರಗಳು ಬೀಳುವ ಬಗ್ಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಜನರಿಗಾಗುವ ಅನಾಹುತ ಅಥವಾ ಅನಾನುಕೂಲತೆ ತಪ್ಪಿಸಬೇಕು ಎಂದು ಮನವಿ ಮಾಡಿದರು.