ತಿರುವನಂತಪುರ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೇರಳದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗುರುವಾಯೂರಿಗೆ ಭೇಟಿ ನೀಡಿದ್ದಾರೆ.
ಗುರುವಾಯೂರಿನ ಶ್ರೀಕೃಷ್ಣ ದೇವಸ್ಥಾನಕ್ಕೆ ಇಂದು ಭೇಟಿ ನೀಡಿರುವ ಬಿ.ಎಸ್.ಯಡಿಯೂರಪ್ಪ, ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದರು.


ನಂತರ ಅಲ್ಲಿಯ ಆಡಳಿತ ಮಂಡಳಿಯ ಆಹ್ವಾನದ ಮೇರೆಗೆ ಶ್ರೀ ಮಹಾಗೋಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇನ್ನು ಬಿ.ಎಸ್.ಯಡಿಯೂರಪ್ಪ ಅವರಿಗೆ ಅಲ್ಲಿನ ದೇವಸ್ಥಾನದ ವತಿಯಿಂದ ಗೌರವಿಸಿ, ಸನ್ಮಾನ ಮಾಡಲಾಯಿತು.
ಈ ಫೋಟೋಗಳನ್ನು ಬಿಎಸ್ ಯಡಿಯೂರಪ್ಪ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೂಡ ಬಿಎಸ್‌ವೈ ಅವರೊಂದಿಗೆ ಗುರುವಾಯೂರಿಗೆ ತೆರಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.