ಮಧ್ಯಪ್ರದೇಶ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಕುಟುಂಬ ಸಮೇತರಾಗಿ ಉಜ್ಜಯಿನಿಗೆ ತೆರಳಿರುವ ಬಿ.ಎಸ್.ಯಡಿಯೂರಪ್ಪ, ಮಹಾಕಾಳೇಶ್ವರ ಜ್ಯೋತಿರ್ಲಿಂಗದ ದರ್ಶನ ಪಡೆದಿದ್ದಾರೆ. ಇನ್ನು ಬಿಎಸ್‌ವೈ ಜೊತೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೂಡ ಉಜ್ಜಯಿನಿಗೆ ತೆರಳಿದ್ದಾರೆ.


ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅನರ್ಹ ಕೇಸ್; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆ ಕುರಿತು ಮಾತನಾಡಿದ ಯಡಿಯೂರಪ್ಪ, ಇಡೀ ಜಗತ್ತು ಪ್ರಧಾನಿ ಮೋದಿಯವರ ನಿರ್ಧಾರವನ್ನು ಶ್ಲಾಘಿಸುತ್ತಿದೆ. ಇಡೀ ವಿಶ್ವದ ಪ್ರಮುಖರು ಭಾರತಕ್ಕೆ ಬಂದಿದ್ದಾರೆ. ನಾನು ಅವರನ್ನು ಇಡೀ ದೇಶದ ಪರವಾಗಿ ಅಭಿನಂದಿಸುತ್ತೇನೆ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.