Sunday, October 1, 2023
spot_img
- Advertisement -spot_img

BREAKING NEWS: ಮಾಜಿ ಸಿಎಂ ಹೆಚ್​ಡಿಕೆ ಆಸ್ಪತ್ರೆಗೆ ದಾಖಲು

ಬೆಂಗಳೂರು : ಅನಾರೋಗ್ಯದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸತತ ಪ್ರವಾಸ ಕಾರಣ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಕೋಲಾರ ಭೇಟಿ ರದ್ದು : ಜ್ವರದಿಂದ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಕುಮಾರಸ್ವಾಮಿಯವರ ಇಂದಿನ ಕೋಲಾರ ಭೇಟಿ ರದ್ದಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಕುಮಾರಸ್ವಾಮಿ ರೈತರ ಜಮೀನುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳಿಗೆ ಹಾನಿಯಾಗಿತ್ತು. ಈ ಹಿನ್ನೆಲೆ ರೈತರೊಂದಿಗೆ ಮಾತುಕತೆ ನಡೆಸಲು ಕುಮಾರಸ್ವಾಮಿ ತೆರಳುವವರಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles