ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಪತ್ರಿಕಾ ವಿತರಕರ ದಿನದ ಅಂಗವಾಗಿ ರಾಜ್ಯದ ಎಲ್ಲ ಪತ್ರಿಕಾ ವಿತರಕರಿಗೆ ಶುಭಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ಚಳಿ, ಮಳೆ, ಬಿಸಿಲೆನ್ನದೆ ಸೂರ್ಯೋದಯಕ್ಕೆ ಮುನ್ನವೇ ಮನೆ ಮನೆಗೂ ಪತ್ರಿಕೆ ತಲುಪಿಸುವ ಎಲ್ಲರಿಗೂ ಪತ್ರಿಕಾ ವಿತರಕರ ದಿನದ ಶುಭಾಶಯಗಳು. ನಸುಕಿನಲ್ಲೇ ಜೀವದ ಹಂಗು ತೊರೆದು ಹೊರಡುವ ವಿತರಕರ ಬದ್ಧತೆ ಅನುಕರಣೀಯ. ಬೆಳಗ್ಗೆಯೇ ಪತ್ರಿಕೆ ಓದದಿದ್ದರೆ ಒಂದು ರೀತಿಯ ನಿರ್ವಾತ ಸ್ಥಿತಿ, ನನ್ನ ನಿತ್ಯ ಬದುಕಿನಲ್ಲಿ ಪತ್ರಿಕೆಗಳ ಪಾತ್ರ ದೊಡ್ಡದು ಎಂದು ಶ್ಲಾಘಿಸಿದ್ದಾರೆ.


ಅಲ್ಲದೆ, ಪತ್ರಿಕಾ ವಿತರಕರು ಕಷ್ಟದಲ್ಲಿದ್ದಾರೆ. ಅವರ ಬದುಕಿಗಾಗಿ ಸರ್ಕಾರವು ವಿಮೆ, ಕ್ಷೇಮನಿಧಿ ಸೌಲಭ್ಯ ನೀಡಿ, ಅವರ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದು ಸೇರಿದಂತೆ ಕೆಲವಾದರೂ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಕ್ರಮವಹಿಸಲಿ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರಕಾರದ ಕರ್ತವ್ಯವೂ ಹೌದು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಶೆಟ್ಟರ್
ಇನ್ನು ನಿನ್ನೆಯಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಮುಂಜಾನೆ ದಿನಪತ್ರಿಕೆ ಓದುವ ಹವ್ಯಾಸವನ್ನು ಮುಂದುವರಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ಕುಮಾರಸ್ವಾಮಿ ದಾಖಲಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.