ಬೆಂಗಳೂರು : ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಚೇತರಿಸಿಕೊಂಡಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ.
ಇಂದು ಬೆಳಿಗ್ಗೆ 10 ಗಂಟೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿರುವ ಹೆಚ್ ಡಿಕೆ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ. ಕುಮಾರಸ್ವಾಮಿ ಡಿಸ್ಚಾರ್ಚ್ ಆಗುವ ವೇಳೆ ಆಸ್ಪತ್ರೆ ಬಳಿ ಭಾರೀ ಜನಸ್ತೋಮ ಸೇರುವ ಸಾಧ್ಯತೆ ಇದೆ.
ಇದನ್ನೂ ಓದಿ : ಶೋಭಾ ಕರಂದ್ಲಾಜೆ ‘ಧೈರ್ಯವಿದ್ದರೆ ಪ್ರೆಸ್‌ಮೀಟ್ ಕರೆದು ‘ಗ್ಯಾರಂಟಿ’ ನಿಲ್ಲಿಸಲು ಹೇಳಲಿ’
ಲಘು ಬ್ರೈನ್ ಸ್ಟ್ರೋಕ್ ಹಿನ್ನೆಲೆ ಕುಮಾರಸ್ವಾಮಿ ಕಳೆದ ಬುಧವಾರ ಬೆಳಗಿನ ಜಾವ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದ ಬಳಿಕ ಅವರು ಚೇತರಿಸಿಕೊಂಡಿದ್ದು, ನಂತರ ವಿಶೇಷ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಗಣ್ಯರಿಂದ ಅರೋಗ್ಯ ವಿಚಾರಣೆ : ಹೆಚ್ ಡಿಕೆ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕ ಗಣ್ಯರು ಅವರ ಅರೋಗ್ಯ ವಿಚಾರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಚೆಲುವರಾಯಸ್ವಾಮಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಸಚಿವರಾದ ಸಿ.ಪಿ ಯೋಗೇಶ್ವರ್, ಅಶ್ವಥ ನಾರಾಯಣ, ಆರ್. ಅಶೋಕ್, ಹೆಚ್.ಡಿ ರೇವಣ್ಣ, ಸಂಸದ ಪ್ರತಾಪ್ ಸಿಂಹ, ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಜನ ಪ್ರತಿನಿಧಿಗಳು, ಸಾಮಾಜಿಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.