Thursday, June 8, 2023
spot_img
- Advertisement -spot_img

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ

ಚಿಕ್ಕಮಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದು, ಶಾರದಾಂಬೆ ದರ್ಶನ ಪಡೆದರು.

ಈ ವೇಳೆ ಶೃಂಗೇರಿ ಮಠದ ಭಾರತೀ ತೀರ್ಥ ಶ್ರೀಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬ್ರಾಹ್ಮಣ ಸಮುದಾಯದ ಸಂಖ್ಯೆ ಹೆಚ್ಚಿರುವ ಶೃಂಗೇರಿ ಕ್ಷೇತ್ರವಾಗಿದೆ. ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆಯಲಿದ್ದು, ಶ್ರೀಗಳ ಜತೆ ಸಮಾಲೋಚನೆ ಮಾಡಲಿದ್ದಾರೆ. ಇಂದು ಮತ್ತು ನಾಳೆ ಶೃಂಗೇರಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಿದ್ದು, ಜೆಡಿಎಸ್ ಅಭ್ಯರ್ಥಿ ಸುಧಾಕರ್​​​​ ಶೆಟ್ಟಿ ಪರ ಹೆಚ್​ಡಿಕೆ ಮತಯಾಚನೆ ಕೇಳಲಿದ್ದಾರೆ.

ಶೃಂಗೇರಿಯಲ್ಲೇ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಸಾಧ್ಯತೆಗಳಿವೆ. ಜೆಡಿಎಸ್ ಪಂಚರತ್ನ ಯಾತ್ರೆಗೆ ಶೃಂಗೇರಿ ಮಠದಿಂದ ಚಾಲನೆ ನೀಡಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 4 ದಿನಗಳ ಕಾಲ ಪಂಚರತ್ನ ಯಾತ್ರೆ ನಡೆಯಲಿದೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಶೃಂಗೇರಿ ಮಠ ಮತ್ತು ಬ್ರಾಹ್ಮಣರ ವಿರುದ್ಧ ಹೇಳಿಕೆ ನೀಡಿದ್ದರು. ಇದು ಬ್ರಾಹ್ಮಣ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿತ್ತು.

ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಜಿಲ್ಲೆಯ ಜನತೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

Related Articles

- Advertisement -spot_img

Latest Articles