ತಿರುವಂತಪುರಂ : ಕೇರಳದ ಕೊಟ್ಟಾಯಂ ಜಿಲ್ಲೆಯ ಪುತ್ತುಪ್ಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಇತ್ತೀಚೆಗೆ ನಿಧನರಾದ ಮಾಜಿ ಸಿಎಂ ಉಮ್ಮನ್ ಚಾಂಡಿ ಪುತ್ರ ಚಾಂಡಿ ಉಮ್ಮನ್ ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ತಂದೆಯ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಪುತ್ರ ಆಯ್ಕೆಯಾಗಿದ್ದಾರೆ.
ಯುವ ಕಾಂಗ್ರೆಸ್ ನಾಯಕ ಮತ್ತು ಕಳೆದ ವರ್ಷ ನಡೆದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಚಾಂಡಿ ಉಮ್ಮನ್, 78,098 ಮತಗಳ ಮೂಲಕ ಜಯಭೇರಿ ಬಾರಿಸಿದರು.
ಇದನ್ನೂ ಓದಿ : ‘ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ’
ಚಾಂಡಿ ಉಮ್ಮನ್ ಅವರ ತಂದೆ ಉಮ್ಮನ್ ಚಾಂಡಿ, ಹಿರಿಯ ಕಾಂಗ್ರೆಸ್ ನಾಯಕರಾಗಿದ್ದರು. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿದ್ದರು. 1970ರಿಂದ ಸತತವಾಗಿ ಗೆಲುವು ದಾಖಲಿಸುತ್ತಾ ಬಂದಿದ್ದರು. ಇತ್ತೀಚೆಗೆ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸೆಪ್ಟೆಂಬರ್ 5ರಂದು ಉಪ ಚುನಾವಣೆ ನಡೆದಿತ್ತು.
ಪುತ್ತುಪ್ಪಲ್ಲಿ ವಿಧಾನಸಭಾ ಕ್ಷೇತ್ರ 1.76 ಲಕ್ಷ ನೋಂದಾಯಿತ ಮತದಾರರನ್ನು ಹೊಂದಿದ್ದು, ಉಪ ಚುನಾವಣೆಗೆ 182 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಪೈಕಿ ನಾಲ್ಕು ಮತಗಟ್ಟೆಗಳನ್ನು ‘ಸೂಕ್ಷ್ಮ’ ಎಂದು ವರ್ಗೀಕರಿಸಲಾಗಿತ್ತು. ಪುತ್ತುಪ್ಪಲ್ಲಿ ನಗರದ ಬಸೇಲಿಯಸ್ ಕಾಲೇಜು ವಿಶೇಷ ಕೇಂದ್ರದಲ್ಲಿ ಇಂದು ಮತ ಎಣಿಕೆ ನಡೆಯಿತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.