ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದ್ದಕಿದ್ದಂತೆ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಹಳೇ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೇಲಾಗಿ ಅವರಿಗೆ ತೀವ್ರವಾದ ಉಸಿರಾಟದ ಸೋಂಕು ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇನ್ನು ಎಸ್.ಎಂ.ಕೃಷ್ಣ ಅವರು ಮೈಸೂರು ಹೆಚ್‌ಓಡಿ ಶ್ವಾಸಕೋಶಶಾಸ್ತ್ರ, ಡಾ ಸತ್ಯನಾರಾಯಣ ಮತ್ತು ಡಾ ಸುನೀಲ್ ಕಾರಂತ್ ಅವರ ನೇತೃತ್ವದ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದು, ತೀವ್ರ ನಿಗಾ ಮತ್ತು ವಿಶಾಲವಾದ ವಿಶೇಷ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ಆರೋಗ್ಯ ಸಚಿವ ಡಾ ಸುಧಾಕರ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಎಸ್.ಎಂ.ಕೃಷ್ಣಾ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು ಅಥವಾ ನಾಳೆ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.