ಬೆಂಗಳೂರು: ರಾಜ್ಯ ಭ್ರಷ್ಟ ಸರ್ಕಾರದ ವಿರುದ್ಧ ಸೆ.8ರಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿದರು.
ಸರ್ಕಾರ ಬಂದು ನೂರು ದಿನಗಳನ್ನು ಪೂರೈಸಿದರೂ ಭ್ರಷ್ಟಾಚಾರ ಹೆಚ್ಚಾಗಿದೆ. ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು ಜನಪರ ಕೆಲಸ ಮಾಡುವ ಉದ್ದೇಶದೊಂದಿಗೆ ಈ ಹೋರಾಟ ಹಮ್ಮಿಕೊಂಡಿದ್ದೇವೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬೃಹತ್ ಹೋರಾಟಕ್ಕೆ ಯೋಜನೆ ರೂಪಿಸಿದ್ದೇವೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದರು.
ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಲಿದ್ದೇವೆ. 100 ದಿನ ಪೂರೈಸಿರುವ ಸರ್ಕಾರ ಯಾವ ಒಳ್ಳೆಯ ಕೆಲಸ ಮಾಡಿಲ್ಲ. ರಾಜ್ಯ ಸರ್ಕಾರ ಸಂಪೂರ್ಣವಾಗಿ ಭ್ರಷ್ಡಚಾರದಲ್ಲಿ ತೊಡಗಿದೆ. ಕಾವೇರಿ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಗುತ್ತಿಗೆದಾರರಿಗೆ ಹಣ ನೀಡದೆ ಸತಾಯಿಸುತ್ತಿರುವುದನ್ನು ನಾವು ನೋಡಿದ್ದೇವೆ ಎಂದು ದೂರಿದರು.
ಇದನ್ನೂ ಓದಿ: ವಿಪಕ್ಷದವ್ರು ಸಿಎಂ, ಡಿಸಿಎಂ ಭೇಟಿಯಾಗೋದು ಸಹಜ: ಅಶ್ವತ್ಥ್ ನಾರಾಯಣ
ರೈತರ ಹಿತ ಕಾಪಾಡದೇ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಲೋಡ್ ಶೆಡ್ಡಿಂಗ್ ಮುಖಾಂತರ ರೈತರಿಗೆ ಅನ್ಯಾಯ ಆಗುತ್ತಿದೆ. ರೈತರ ಆತ್ಮಹತ್ಯೆ ಕುರಿತು ಸರ್ಕಾರ ಮಾತನಾಡುವುದಿಲ್ಲ. ಖಾಲಿ ವಸೂಲಿ ಮಾಡುವುದರಲ್ಲಿ ಸರ್ಕಾರ ಬ್ಯುಸಿಯಾಗಿದೆ. ಸರ್ಕಾರದ ಗಮನ ಸೆಳೆದು ತರಾಟೆಗೆ ತೆಗೆದುಕೊಳ್ಳಬೇಕಾಗಿದೆ ಎಂದು ಅಶ್ವತ್ಥನಾರಾಯಣ ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.