ಬೆಂಗಳೂರು: ಬಿಜೆಪಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಕುಮಾರಸ್ವಾಮಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಇತ್ತೀಚೆಗಷ್ಟೇ ಡಿಸ್ಚಾರ್ಜ್ ಆಗಿದ್ದರು. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆ ಸುಧಾಕರ್ ಅವರು ಖುದ್ದು ಹೆಚ್‌ಡಿಕೆ ನಿವಾಸಕ್ಕೆ ತೆರಳಿ, ಯೋಗಕ್ಷೇಮ ವಿಚಾರಿಸಿದರು.


ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಅವರ ಸ್ವಗೃಹದಲ್ಲಿ ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದೆ. ಈ ಸಂದರ್ಭದಲ್ಲಿ ಅವರ ಸುಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಉಪಸ್ಥಿತರಿದ್ದರು ಎಂದಿದ್ದಾರೆ.
ಇದನ್ನೂ ಓದಿ: ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ಸಿಎಂ, ಬಿಎಸ್‌ವೈ, ಬೊಮ್ಮಾಯಿ
ಅನಾರೋಗ್ಯದ ಹಿನ್ನೆಲೆ ಹೆಚ್.ಡಿ ಕುಮಾರಸ್ವಾಮಿ ಅವರು ಕಳೆದ ವಾರ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.