ಬೆಳಗಾವಿ: ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀಕಾಂತ ಶೆಟ್ಟೆಪ್ಪ ಭೀಮಣ್ಣವರ (81) ಅನಾರೋಗ್ಯದಿಂದ ಇಂದು ನಿಧನರಾದರು.
1983ರಲ್ಲಿ ಚಿಕ್ಕೋಡಿ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೀಮಣ್ಣವರ, ಚುನಾವಣೆಯಲ್ಲಿ ಸೋತಿದ್ದರು. 1989ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು.
2004ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು, ಮತ್ತೆ ಸೋಲು ಕಂಡಿದ್ದರು. ನಂತರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬಳಿಕ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.
ಶ್ರೀಕಾಂತ ಭೀಮಣ್ಣವರ ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದು, ಚಿಕ್ಕೋಡಿ ತಾಲ್ಲೂಕಿನ ಮಾಂಜರಿಯಲ್ಲಿ ಅಂತ್ಯಕ್ರಿಯೆ ನೆರವೇರಿತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.