ಮೈಸೂರು: ಮುಖ್ಯಮಂತ್ರಿ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸರ್ಕಾರದಿಂದ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಜತೆಗೆ, ಕೆಡಿಪಿ ಸದಸ್ಯರಾನ್ನಾಗಿಯೂ ಅವರನ್ನು ನೇಮಿಸಲಾಗಿದ್ದು, ‘ಸರ್ಕಾರಿ ಅಧಿಕಾರಿಗಳ ಸಭೆಯಲ್ಲಿ ಯತೀಂದ್ರ ಭಾಗವಹಿಸುತ್ತಿದ್ದಾರೆ’ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗುತ್ತಿದ್ದಂತೆ ಎಚ್ವೆತ್ತ ಸಿಎಂ, ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ‘ಕಳೆದ 15 ದಿನದ ಹಿಂದೆಯೇ ನನ್ನ ನೇಮಕಾತಿ ಆದೇಶ ಆಗಿದೆ. ಆದೇಶ ಪತ್ರವನ್ನ ನಿಮಗೆ ಕಳುಹಿಸಿಕೊಡುತ್ತೇವೆ. ವರುಣಾ ಕ್ಷೇತ್ರದ ಜನರ ಸಮಸ್ಯೆ ಆಲಿಸುತ್ತೇನೆ’ ಎಂದು ಹೇಳಿಕೆ ನೀಡಿದ್ದಾರೆ.
ಪಕ್ಷ ಸೂಚಿಸಿದರೆ ಅಭ್ಯರ್ಥಿಯಾಗುತ್ತೇನೆ
ಪಕ್ಷ ಸೂಚಿಸಿದರೆ ನಾನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುತ್ತೇನೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ; ‘ಗ್ಯಾರಂಟಿ ಸರ್ಕಾರ’ಕ್ಕೆ 100 ದಿನ; ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ
ಈ ಬಗ್ಗೆ ನಗರದಲ್ಲಿ ಮಾತನಾಡಿದ ಯತೀಂದ್ರ, ‘ಲೋಕಸಭಾ ಚುನಾವಣೆಗೆ ನನ್ನದು ಯಾವ ಬೇಡಿಕೆಯೂ ಇಲ್ಲ, ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ವರಿಷ್ಠರು ಸೂಚಿಸಿದರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುತ್ತೇನೆ. ಪಕ್ಷದ ಮಾತನ್ನ ನಾನು ಕೇಳಲೇ ಬೇಕು’ ಎಂದು ಹೇಳಿದರು.
‘ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಅತಿ ಹೆಚ್ಚು ಸೀಟ್ ಗೆಲ್ಲಬೇಕು. ವಿಧಾನಸಭಾ ಚುನಾವಣೆಯಲ್ಲಿ ಜನ ನಮ್ಮನ್ನ ಗೆಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತ ನೋಡಿದ್ದ ಜನ ಬೇಸತ್ತು ನಮಗೆ ಆಶಿರ್ವಾದ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸುತ್ತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲೋಕೆ ತಂತ್ರಗಾರಿಕೆ ಮಾಡಬೇಕು’ ಎಂದರು.
‘ಯಾವ ಅಭ್ಯರ್ಥಿ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಯನ್ನ್ನು ಎದುರಿಸಲು ಸಮರ್ಥರಿದ್ದಾರೋ ಅವರನ್ನ ಸರ್ವೆ ಮೂಲಕ ಅಯ್ಕೆ ಮಾಡುತ್ತಾರೆ. ಸ್ಥಳೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಸೂಕ್ತ ಅಭ್ಯರ್ಥಿಗಳನ್ನ ಅಯ್ಕೆ ಮಾಡುತ್ತಾರೆ’ ಎಂದು ಮಾಹಿತಿ ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.