ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತರಾಗಿ ಜೆಡಿಎಸ್ ಸೇರಿದ್ದ ಮಾಜಿ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಇಂದು ಜೆಡಿಎಸ್‌ಗೆ ಗುಡ್‌ಬೈ ಹೇಳಲಿದ್ದಾರೆ.
ತಮ್ಮ ರಾಜಕೀಯ ಊಹಾಪೋಹದ ಸುದ್ದಿಗಳಿಗೆ ಪೂರ್ಣ ವಿರಾಮ ನೀಡಲು ಸಜ್ಜಾಗಿರುವ ಅವರು, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.
ಇದನ್ನೂ ಓದಿ : ʼಇಸ್ರೋʼಗೆ ವಿಶ್ ಮಾಡಲು ನಮ್ಮ ಬೆಂಗಳೂರಿಗೆ ಬರ್ತಿದ್ದಾರೆ ಮೋದಿ
ರಾಜ್ಯದಲ್ಲಿ ಆಪರೇಷನ್ ಹಸ್ತದ ಸುದ್ದಿ ಜೋರಾಗಿರುವಾಗಲೇ ಇದಕ್ಕೆ ಪುಷ್ಠಿ ನೀಡುವಂತೆ ಜೆಡಿಎಸ್‌ನ ಮೊದಲ ವಿಕೆಟ್ ಪತನವಾಗಲಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರಿದ್ದ ಆಯನೂರು ಇದೀಗ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಕೈ ಹಿಡಿಯಲಿದ್ದಾರೆ.
ಜೆಡಿಎಸ್ ಪಕ್ಷದಿಂದ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದ ಅವರು, ಕಳೆದ ಭಾನುವಾರವಷ್ಟೇ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರಲು ಗ್ರೀನ್ ಸಿಗ್ನಲ್ ಪಡೆದಿದ್ದರು.
ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಸೇರಬೇಕಾಗಿತ್ತು. ಆದರೆ ಆಗ ಸಾಧ್ಯವಾಗಲಿಲ್ಲ, ನಾನು ಜೆಡಿಎಸ್ ಪಕ್ಷದಿಂದ ಕಣಕ್ಕಿಳಿದೆ. ಈಗ ಕಾಂಗ್ರೆಸ್ ಸೇರಲು ಸ್ಥಳೀಯ ಶಾಸಕರು, ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳ ಒಪ್ಪಿಗೆ ಸಿಕ್ಕಿದೆ. ಗುರುವಾರ ಬೆಂಗಳೂರಿನಲ್ಲಿ ಅಭಿಮಾನಿಗಳ ಜೊತೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು ನಿನ್ನೆಯಷ್ಟೇ ಹೇಳಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.