ಚಿಕ್ಕಮಗಳೂರು : ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಫೋಸ್ಟರ್ ಅಭಿಯಾನ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿಎಂ ಪೋಸ್ಟರ್ ಅಂಟಿಸಲಾಗಿದೆ.
ನಗರದ ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಂಟಿಸಿ ಅಭಿಯಾನ ಪ್ರಾರಂಭಿಸಲಾಗಿದೆ.
ಇದನ್ನೂ ಓದಿ: ಟೀಂ ಇಂಡಿಯಾವನ್ನು ಕೇಸರೀಕರಣಗೊಳಿಸಲಾಗ್ತಿದೆ: ಕೇಂದ್ರದ ವಿರುದ್ಧ ದೀದಿ ಕಿಡಿ
ಬಿಜೆಪಿಯವರು ನಗರದಲ್ಲಿ ಅಲ್ಲಲ್ಲೇ ಪೋಸ್ಟರ್ ಅಂಟಿಸಿದ್ದು. ವ್ಯಂಗ್ಯ ಚಿತ್ರದ ಮೂಲಕ ಸರ್ಕಾರದ ವಿರುದ್ಧ ವ್ಯಂಗ್ಯ ಮಾಡಲಾಗಿದೆ. ರಾಜ್ಯವನ್ನು ಕತ್ತಲೆಗೆ ದೂಡಿ ಕೆ.ಜೆ.ಜಾರ್ಜ್ ಇಂಧನ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ನಾಪತ್ತೆ ಎಂದು ಪೋಸ್ಟರ್ ಅಂಟಿಸಲಾಗ್ತಿದ್ದು, ಸೋನಿಯಾ ಗಾಂಧಿ ಈ ತಿಂಗಳ ಕಪ್ಪ ಎಲ್ಲಿ ಎಂದು ಪ್ರಶ್ನೆ ಕೇಳಿದ್ದು, ಈಗ ತಾನೇ ವಿದ್ಯುತ್ ಬಿಲ್ ಹೆಚ್ಚಳವಾಗಿದೆ… ಇರೀ ಮ್ಯಾಮ್ ಎನ್ನುತ್ತಿರೋ ಇಂಧನ ಸಚಿವ ಅನ್ನುವಂತೆ ಪೋಸ್ಟರ್ ಅಂಟಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ: ₹600 ಕೋಟಿ ಭ್ರಷ್ಟಾಚಾರ ಆರೋಪ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಅಭಿಯಾನದಲ್ಲಿ ಸೋನಿಯಾ ಗಾಂಧಿ ಸಿ.ಎಂ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಸರ್ಕಾರ ಒಂದೆಡೆ ಉಚಿತ ಎಂದು ಹೇಳಿಕೊಂಡು ಮತ್ತೊಂದೆಡೆ ಸುಲಿಗೆ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ಇದು ಫ್ರೀ ಭಾಗ್ಯವಲ್ಲ. ಹಗಲು ದರೋಡೆ ಎಂದು ಚಿಕ್ಕಮಗಳೂರು ನಗರದಾದ್ಯಂತ ಅಲ್ಲಲ್ಲೇ ಪೋಸ್ಟರ್ ಹಾಕಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.