ವಾಜಿರಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದೆ. ಪಾಕಿಸ್ತಾನದ ವಾಜಿರಾಬಾದ್‌ನಲ್ಲಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುರಿ ತಪ್ಪಿದ ಕಾರಣ ಇಮ್ರಾನ್ ಖಾನ್ ಕಾಲಿಗೆ ತುಗುಲಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಮ್ರಾನ್ ಖಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಚುನಾವಣೆಯ ಸಿದ್ದತೆಗಾಗಿ ಲಾಹೋರ್‌ನ ವಜೀರಾ ಬಾದ್‌ನಲ್ಲಿ ತೆರೆದ ವಾಹನದಲ್ಲಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ್ದಾನೆ. ಇಮ್ರಾನ್ ಅವರ ಬಲಗಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಇದ್ರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಾಳಿ ನಡೆದ ನಂತರ ಇಮ್ರಾನ್ ಅವರಿಗೆ ಪೊಲೀಸರು ಗುಂಡು ನಿರೋಧಕ ಜಾಕೆಟ್ ತೊಡಿಸಿ ಇನ್ನೊಂದು ವಾಹನದಲ್ಲಿ ಕರೆದೊಯ್ಯುತ್ತಿರುವ ದೃಶ್ಯಗಳನ್ನು ಸ್ಥಳೀಯ ಮಾಧ್ಯಮಗಳು ಬಿತ್ತರಿಸಿವೆ. ಸದ್ಯ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯಾವ ಕಾರಣಕ್ಕಾಗಿ ಈ ದಾಳಿ ನಡೆಸಿದ್ದಾನೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಪಾಕಿಸ್ತಾನ ಸರ್ಕಾರದ ವಿರುದ್ಧದ ಸತತ ವಾಗ್ದಾಳಿ ನಡೆಸುತ್ತಿದ್ದ ಇಮ್ರಾನ್ ಖಾನ್, ಭಾರಿ ದೊಟ್ಟ ಮಟ್ಟದಲ್ಲಿ ರ್ಯಾಲಿ ಆಯೋಜಿಸಿ ಯಶಸ್ವಿಯಾಗಿದ್ದರು. ಸತತ ರ್ಯಾಲಿ ಮೂಲಕ ಪಾಕಿಸ್ತಾನದಲ್ಲಿ ಮತ್ತೆ ಅಧಿಕಾರ ಹಿಡಿಯಲು ಸರ್ವ ಪ್ರಯತ್ನ ನಡೆಸುತ್ತಿದ್ದರು. ತಮ್ಮ ರ್ಯಾಲಿಯಲ್ಲಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ವಿದೇಶಾಂಗ ನೀತಿಯನ್ನು ಹಾಡಿಹೊಗಳಿದ್ದರು. ಶೂನ್ಯ ಭ್ರಷ್ಟಾಚಾರದ ವಿಷಯಲ್ಲಿ ಮೋದಿ ಅವರನ್ನು ನೋಡಿ ಕಲಿಯಿರಿ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್‌ಗೆ ಚಾಟಿ ಬೀಸಿ ಪಾಕ್ ಸರ್ಕಾರದ ವಿರುದ್ಧ ಆರೋಪಗಳ ಮಳೆ ಸುರಿದ್ದರು.