ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಯಾರಿಗೆ ಬೆಂಬಲ ನೀಡಲಿದೆ ಎಂಬ ಕುತೂಹಲ ಇನ್ನು ಮುಂದುವರಿದೆ. ಈ ನಡುವೆ ಪಕ್ಷದ ವರಿಷ್ಠ ದೇವೇಗೌಡರು ಕೇಂದ್ರ ಸಚಿವ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಹಿನ್ನೆಲೆ ವಕೀಲರನ್ನು ಭೇಟಿಯಾಗಲು ದೇವೇಗೌಡರು ದೆಹಲಿಗೆ ತೆರಳಿದ್ದಾರೆ. ಈ ವೇಳೆ ರಹಸ್ಯವಾಗಿ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಸಮರಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ? : ಅಮಿತ್ ಶಾ ಭೇಟಿ ವೇಳೆ ಅನೌಪಚಾರಿಕವಾಗಿ ಮೈತ್ರಿ ಮಾತುಕತೆ ನಡೆಸಿರುವ ದೇವೇಗೌಡರು ನಾಲ್ಕೈದು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್ ಗೆ ಬೆಂಬಲ ನೀಡುವಂತೆ ಕೇಳಿರುವ ದೇವೇಗೌಡರು, ಈ ಭಾಗದಲ್ಲಿ ನಮಗೆ ಹೆಚ್ಚು ಶಕ್ತಿ ಇದೆ. ನೀವು ನಮ್ಮ ಕೈ ಜೋಡಿಸಿ, ಉಳಿದ ಕಡೆ ನಾವು ನಿಮಗೆ ಬೆಂಬಲ ನೀಡುವುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಂದೆ ಯಾರಿಗೆ ಬೆಂಬಲ ನೀಡಬೇಕು ಎಂಬುವುದರ ಬಗ್ಗೆ ತೀರ್ಮಾನ ಆಗಬೇಕಿದೆ. ನಾವು ‘ಇಂಡಿಯಾ’ ಒಕ್ಕೂಟದ ಯಾವುದೇ ಸಭೆಗೆ ಹಾಜರಾಗಿಲ್ಲ ಎಂದು ಕೆಲ ದಿನಗಳ ಹಿಂದೆ ಮಾಜಿ ಸಿಎಂ ಹೆಚ್ ಡಿಕೆ ಕುಮಾರಸ್ವಾಮಿ ಹೇಳಿದ್ದರು. ಹೀಗಾಗಿ, ಜೆಡಿಎಸ್ ಬಹುತೇಕ ಬಿಜೆಪಿ ಜೊತೆ ಸೇರಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ ದೇವೇಗೌಡರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.