Monday, March 27, 2023
spot_img
- Advertisement -spot_img

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಆಯ್ಕೆ

ಬೆಂಗಳೂರು : ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಮತ್ತೂಮ್ಮೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಭೆಯಲ್ಲಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕೇರಳದ ಇಂಧನ ಸಚಿವ ಕೃಷ್ಣನ್ ಕುಟ್ಟಿ, ಪಕ್ಷದ ರಾಜ್ಯಧ್ಯಕ್ಷ ಸಿಎಂ ಇಬ್ರಾಹಿಂ ಸಹಿತ ಹಲವರು ಭಾಗಿಯಾಗಿದ್ದರು. 13 ರಾಜ್ಯಗಳ ಪ್ರತಿನಿಧಿಗಳು ಭಾಗಿ, ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಸೇರಿ ವಿವಿಧ ರಾಜ್ಯಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗಿ ಆಗಿದ್ದರು.ಮಾಜಿ ಪ್ರಧಾನಿ ದೇವೇಗೌಡ ಅವರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಬೇಕು ಎಂದು ಎಲ್ಲರೂ ಒಮ್ಮತದಿಂದ ನಿರ್ಣಯಿಸಿದ್ದರು.

89 ವರ್ಷ ವಯಸ್ಸಿನ ಹಿರಿಯ ನಾಯಕ ಹೆಚ್​. ಡಿ ದೇವೇಗೌಡ 1999 ರಲ್ಲಿ ಪಕ್ಷ ಆರಂಭವಾದಾಗಿನಿಂದ ಅಂದರೆ 23 ವರ್ಷಗಳಿಂದ ಜೆಡಿಎಸ್ ವರಿಷ್ಠರಾಗಿದ್ದಾರೆ.ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆ ಮತ್ತು 2024 ರ ಸಾರ್ವತ್ರಿಕ ಚುನಾವಣೆಗಳು ನಡೆಯಲಿದ್ದು, ಅತ್ತ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿರುವ ಸಂದರ್ಭದಲ್ಲಿ ಎಚ್​ಡಿಡಿ ಅವರ ಆಯ್ಕೆ ಬಹಳ ಮಹತ್ವದ ನಡೆ ಎನ್ನಲಾಗಿದೆ.

89 ವರ್ಷ ವಯಸ್ಸಿನ ಹಿರಿಯ ನಾಯಕ 1999 ರಲ್ಲಿ ಪಕ್ಷ ಪ್ರಾರಂಭವಾದಾಗಿನಿಂದ ದಾಖಲೆಯ 23 ವರ್ಷಗಳ ಕಾಲ ಜೆಡಿಎಸ್ ವರಿಷ್ಠರಾಗಿದ್ದಾರೆ. 13 ರಾಜ್ಯಗಳ ಪ್ರತಿನಿಧಿಗಳು ದೇವೇಗೌಡರು ಜೆಡಿಎಸ್ ಅಧ್ಯಕ್ಷರಾಗಿ ಉಳಿಯಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆ, 2024 ರ ಸಾರ್ವತ್ರಿಕ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿರುವುದರಿಂದ ಜೆಡಿಎಸ್ ಈ ಮಹತ್ವದ ನಿರ್ಣಯ ಕೈಗೊಂಡಿದೆ .ಕಾರ್ಯಕಾರಿಣಿ ಸಭೆಯಲ್ಲಿ ರೈತರು, ದಲಿತರು, ಯುವಕರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ಪಕ್ಷದ ಜಾತ್ಯತೀತ ರುಜುವಾತುಗಳಿಗೆ ಸೂಕ್ತವಾದ ನಿರ್ಣಯಗಳನ್ನು ಅಂಗೀಕರಿಸಲಾಯಿತು.

Related Articles

- Advertisement -

Latest Articles