ಹಾಸನ : ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಅನರ್ಹತೆಯ ನೋವಿನ ನಡುವೆಯೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಟೆಂಪಲ್ ರನ್ ಮುಂದುರೆಸಿದ್ದಾರೆ. ನಿನ್ನೆಯಷ್ಟೇ ಮಾವಿನಕೇರೆಯ ರಂಗನಾಥ ಸ್ವಾಮಿಗೆ ಪೂಜೆ ಸಲ್ಲಿಸಿದ್ದರು.
ಇಂದು ಮತ್ತೆ ಜಿಲ್ಲೆಯ ಸಲಾಗಾಮೆ ಹೋಬಳಿಯ ಬೈಲಹಳ್ಳಿಯಲ್ಲಿರುವ ಲಕ್ಷ್ಮಿ ಜನಾರ್ಧನ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ.
ಇದನ್ನೂ ಒದಿ : G20 Summit-23: ಸೆ.8ರಂದು ಮೋದಿ-ಬೈಡೆನ್ ದ್ವಿಪಕ್ಷೀಯ ಮಾತುಕತೆ
ತಮ್ಮ ಪುತ್ರ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಗೂ ಕಳೆದೆರಡು ದಿನಗಳಿಂದ ಕುಟುಂಬದಲ್ಲಿ ಆವರಿಸಿರುವ ಸಂಕಷ್ಟಗಳನ್ನು ನಿವಾರಿಸಲು ದೇವಸ್ಥಾನಗಳ ಮೊರೆ ಹೋಗುತ್ತಿದ್ದಾರೆ.
ದೇವರಿಗೆ ಭಕ್ತಿಯಿಂದ ಕೈ ಮುಗಿದು ಕುಟುಂಬ ಸದಸ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಏನಾಗಿತ್ತು ಕುಮಾರಸ್ವಾಮಿ ಅವರಿಗೆ..?
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ದೀಡೀರ್ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಅವರು, ಕುಮಾರಸ್ವಾಮಿಯವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಮಾಹಿತಿ ನೀಡಿದ್ದರು
ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿತು. ಇಂದು ಆರೋಗ್ಯವಾಗಿ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.