Wednesday, March 22, 2023
spot_img
- Advertisement -spot_img

ಮುಂದಿನ ತಿಂಗಳಿನಿಂದ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ : ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ಮೈಸೂರು : ಮುಂದಿನ ತಿಂಗಳಿನಿಂದ ಚುನಾವಣಾ ಪ್ರಚಾರಕ್ಕೆ ಹೋಗುವುದಾಗಿ ಮೈಸೂರಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ‌ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭೇಟಿ ನೀಡಿ ತುಲಾಭಾರ ನೆರವೇರಿಸಿದರು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಪಂಚ ರತ್ನ ಯಾತ್ರೆ ಮಾಡುತ್ತಿದ್ದಾರೆ. ಪ್ರತಿ ಹಳ್ಳಿಯಲ್ಲಿ ನಮ್ಮ ಪಕ್ಷದ ಶಾಸಕರು, ಮುಖಂಡರು, ಮಾಜಿ ಶಾಸಕರು ಒಬ್ಬೊಬ್ಬರಿಗೂ ಒಂದೊಂದು ಜವಾಬ್ದಾರಿ ಕೊಡಲಾಗಿದೆ.

ಮನೆ ಮನೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇನೆ ಎಂದರು. ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಶಾಶ್ವತ ಅಲ್ಲ. ಪ್ರತಿದಿನ ಪಟ್ಟಿ ಬದಲಾವಣೆ ಆಗುತ್ತದೆ. ಪ್ರತಿ ದಿನ ಸರ್ವೇ ನಡೆಯುತ್ತಿದೆ. ಅದರ ಆಧಾರದ ಮೇಲೆ ತೀರ್ಮಾನ ಮಾಡಲಾಗುತ್ತದೆ. ಶಾಸಕ ಶಿವಲಿಂಗೇಗೌಡರು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿ, ಶಿವಲಿಂಗೇಗೌಡರು ಹಾಗೂ ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ಅವರು ಚರ್ಚೆ ನಡೆಸಿದ್ದಾರೆ ಎಂದರು.

ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ‌ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭೇಟಿ ನೀಡಿ ತುಲಾಭಾರ ನೆರವೇರಿಸಿದರು. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆ ಕಾಣಿಸಿಕೊಂಡಿತ್ತು, ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನವಾಗಲಿಲ್ಲ.

ಬಳಿಕ ನಂಜುಂಡೇಶ್ವರನ ಸನ್ನಿಧಿಗೆ ಬಂದು ಪ್ರಾರ್ಥಿಸಿದ ನಂತರ ಗುಣವಾಗಿತ್ತು ಈ ಹಿನ್ನೆಲೆ ಮೂರು ವರ್ಷಗಳ ನಂತರ ನಂಜನಗೂಡಿನ ನಂಜುಂಡೇಶ್ವರನ ದರ್ಶನಕ್ಕೆ ಬರುತ್ತಿದ್ದೇನೆ. ಈ ದಿನ ಚೆನ್ನಾಗಿದೆ ಎಂದು ತಿಳಿದು ಇಲ್ಲಿಗೆ ಬಂದಿದ್ದೇನೆ ಎಂದರು. ವಿಶೇಷ ಪೂಜೆಯಲ್ಲಿ ಭಾಗಿಯಾದ ದಂಪತಿ ಏಕವಾರ ರುದ್ರಾಭಿಷೇಕ, ತುಲಾಭಾರ ಸೇವೆ ನೆರವೇರಿಸಿದರು.

Related Articles

- Advertisement -

Latest Articles