ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರಳಿ ನೀಡಲು ಕಾಲಮಿತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಆರ್ಟಿಕಲ್ 370ರ ರದ್ದುಗೊಳಿಸುವಿಕೆಯನ್ನು ಪ್ರಶ್ನಿಸಿ ಹಲವಾರು ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಗಳ ವಿಚಾರಣೆ ನಡೆಸಿದ ಪೀಠ ಪುನಃ ರಾಜ್ಯ ಸ್ಥಾನಮಾನ ನೀಡಬಹುದೇ ನೀಡುವುದಾದರೆ ಕಾಲಮಿತಿ ರೂಪಿಸುವಂತೆ ಸೂಚಿಸಿದೆ.
ಈ ವೇಳೆ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಉತ್ತರಿಸಿ, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ಶಾಶ್ವತವಲ್ಲ. ಪುಲ್ವಾಮಾ ದಾಳಿಯೇ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಬದಲಿಸಲು ಕಾರಣವಾಯಿತು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಅನಿಲ್ ಆಂಟನಿ ನೇಮಕ
ಕೇಂದ್ರಾಡಳಿತ ಪ್ರದೇಶವಾಗಿ ಜಮ್ಮು ಮತ್ತು ಕಾಶ್ಮೀರದ ಪ್ರಸ್ತುತ ಸ್ಥಿತಿ ತಾತ್ಕಾಲಿಕವಾಗಿದೆ. ಅದರ ರಾಜ್ಯ ಸ್ಥಾನ ಮಾನ ಮರುಸ್ಥಾಪಿಸಲಾಗುವುದು ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿ ಆರ್ಟಿಕಲ್ 370ಯನ್ನು ರದ್ದು ಮಾಡಲಾಗಿತ್ತು. ಇದಾದ ಬಳಿಕ ಆರ್ಟಿಕಲ್ 370 ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹಲವಾರು ಅರ್ಜಿ ಸಲ್ಲಿಯಾಗಿದ್ದು, ಸುಪ್ರೀಂ ನಿರಂತರವಾಗಿ ವಿಚಾರಣೆ ನಡೆಸುತ್ತಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.