ಬೆಂಗಳೂರು: ನಗರದಾದ್ಯಂತ ಉಚಿತ ವೈ-ಫೈ ವಲಯಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ‘ಬೆಂಗಳೂರಿನಾದ್ಯಂತ ಉಚಿತ ವೈ-ಫೈ ವಲಯಗಳನ್ನು ಸ್ಥಾಪಿಸುವ ಕುರಿತು ಚರ್ಚಿಸಲು ಖರ್ಗೆ ಬಂದಿದ್ದರು, ಆಗಸ್ಟ್ 30ರ ಮೊದಲು ಈ ಬಗ್ಗೆ ಸಭೆ ಕರೆಯಲು ನಾನು ನಿರ್ಧರಿಸಿದ್ದೇನೆ. ನಗರದ ಮೂಲಸೌಕರ್ಯ ಸೇರಿದಂತೆ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು’ ಎಂದಿದ್ದಾರೆ.
ಇದನ್ನೂ ಓದಿ: ‘ಸಿಡಬ್ಲ್ಯೂಆರ್‌ಸಿ’ ಮುಂದೆ ರಾಜ್ಯಕ್ಕೆ ಹಿನ್ನಡೆ: ತಮಿಳುನಾಡಿಗೆ 5 ಕ್ಯೂಸೆಕ್ ನೀರು ಬಿಡುವಂತೆ ಸೂಚನೆ!
ಮಾತು ಮುಂದಿವರಿಸಿದ ಅವರು, ‘ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳು ನಡೆಸುತ್ತಿರುವ ಅಪಪ್ರಚಾರಗಳು, ಕೋಮು ಸೌಹಾರ್ದತೆ ಕದಡುವುದು ಮಾತ್ರವಲ್ಲದೆ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದ್ದು, ಇದರ ಕಡಿವಾಣಕ್ಕಾಗಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪಿಸುವ ಬಗ್ಗೆಯೂ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ’ ಎಂದಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿಯವರೇ ಅರ್ಜಿ ಹಾಕಿದ್ದಾರೆ : ಸಚಿವ ಮಧು ಬಂಗಾರಪ್ಪ
ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದ ವೇಳೆಯಲ್ಲೂ ಉಚಿತ ವೈ-ಫೈ ಯೋಜನೆ ರೂಪಿಸಲು ಸರ್ಕಾರ ಮುಂದಾಗಲಾಗಿತ್ತು. ಆದರೆ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆ ಜಾರಿಗೆ ಮುಂದಾಗಿರಲಿಲ್ಲ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.