ಬೆಂಗಳೂರು : ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಘೋಷಿಸಿರುವ ನಗರ ಬಂದ್‌ಗೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.
ಖಾಸಗಿ ಶಾಲೆಗಳಲ್ಲಿ ದಾಖಲಾತಿ ಪಡೆದಿರುವ ವಿದ್ಯಾರ್ಥಿಗಳು ಬಸ್ ಬಾರದೇ ಶಾಲಾ ಕಾಲೇಜುಗಳಿಗೂ ಹೋಗಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಖಾಸಗಿ ಬಸ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವ ಕೆಲ ಶಾಲಾ ಕಾಲೇಜುಗಳು ಯಾವುದೇ ಮಾಹಿತಿ ನೀಡದೆ ರಜೆಯನ್ನೂ ನೀಡಿವೆ.
ಇದನ್ನೂ ಓದಿ : ಖಾಸಗಿ ಸಾರಿಗೆ ಒಕ್ಕೂಟದ ಬಂದ್ : ಏರ್‌ಪೋರ್ಟ್ ಟ್ಯಾಕ್ಸಿಗೆ ಕಲ್ಲೆಸೆದ ಕಿಡಿಗೇಡಿಗಳು
ಬಂದ್ ಮುನ್ನೆಚ್ಚರಿಕೆಯಾಗಿ ಕೆಲವು ಖಾಸಗಿ ಶಾಲೆಗಳಿಗೆ ಆಡಳಿತ ಮಂಡಳಿಗಳು ರಜೆ ಘೋಷಿಸಿವೆ. ಇನ್ನುಳಿದಂತೆ ಖಾಸಗಿ ಶಾಲೆಗಳು ಹಾಗೂ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಆ ಶಾಲೆಗಳಿಗೆ ತೆರಳಬೇಕಿದ್ದ ಬಸ್ ನಿಲ್ದಾಣಗಳಲ್ಲೆ ಮಕ್ಕಳು ಬೆನ್ನಿಗೆ ಬ್ಯಾಗ್ ಧರಿಸಿ ತರಗತಿಗಳಿಗೆ ಹೋಗಲಾರದೆ ಪರದಾಟ ಅನುಭವಿಸುತ್ತಿದ್ದಾರೆ.
ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್‌ನಲ್ಲಿ ಆಟೋ ಕ್ಯಾಬ್‌ಗಳಿಲ್ಲದೆ ಪ್ರಯಾಣಿಕರು ಪರದಾಟ ಮುಂದುವರೆದಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ಚಾಲಕ ಸಂಘಟನೆಗಳು 11ಗಂಟೆಗೆ ಆಟೋಗಳಲ್ಲಿ ಮೆರವಣಿಗೆ ಹೊರಟು ಸರ್ಕಾರದ ವಿರುದ್ಧ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿವೆ.
ನಮ್ಮ ಬೇಡಿಕೆಗಳು ಈಡೇರಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಮಹಿಳಾ ಗ್ರಾಹಕರೇ ಹೆಚ್ಚಾಗಿ ಆಟೋಗಳನ್ನು ಬಳಸುತ್ತಿದ್ದರು ಈಗ ಉಚಿತ ಬಸ್ ಯೋಜನೆಯಿಂದ ನಮ್ಮ ಬದುಕು ದುಸ್ತರವಾಗಿದೆ ಎಂದು ಸರ್ಕಾರದ ವಿರುದ್ಧ ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾ ಮೆರವಣಿಗೆ ಹಿನ್ನೆಲೆ ನಗರ ಪೊಲೀಸರು ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.