Monday, March 20, 2023
spot_img
- Advertisement -spot_img

ನಾನು ರಾಜೀನಾಮೆ ನೀಡಿಲ್ಲ, ಆ ಸುದ್ದಿ ಸುಳ್ಳಾಗಿದೆ : ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್

ತುಮಕೂರು: ನನ್ನ ರಾಜೀನಾಮೆ ವಿಚಾರವಾಗಿ ಸುದ್ದಿ ಹರಿದಾಡಿತ್ತು, ಆದರೆ, ಅದೆಲ್ಲಾ ಸುಳ್ಳು ಸುದ್ದಿ ಎಂದು ಮಾಜಿ ಡಿಸಿಎಂ ಡಾ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 3 ಗಂಟೆ ಕಾಲ ಸುರ್ಜೆವಾಲಾರೊಂದಿಗೆ ಚರ್ಚೆ ಮಾಡಿದ್ದೇನೆ. ನಾವು ಯಾವ ರೀತಿ ಚುನಾವಣೆಗೆ ಹೋಗ್ಬೇಕು. ಚುನಾವಣೆಗೆ ನಮ್ಮ ಪಕ್ಷದ ರಣನೀತಿ ಏನು ಇರಬೇಕು. ಚುನಾವಣಾ ಪ್ರಣಾಳಿಕೆಗಳು ಹೇಗೆ ಇರ್ಬೇಕು. ಜನ ಅದನ್ನೂ ಒಪ್ತಾರಾ ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.

ಸುರ್ಜೆವಾಲ ಅವರ ಭೇಟಿಯನ್ನೂ ಬೇರೆ ರೀತಿ ಬಿಂಬಿಸಲಾಗಿದೆ. ಕಾಂಗ್ರೆಸ್ ಹೊರಡಿಸಿದ ಎಲ್ಲ ಪ್ರಣಾಳಿಕೆಗಳು ನನ್ನ ಗಮನಕ್ಕೆ ಬಂದಿದೆ‌. ನಾವೆಲ್ಲರೂ ಒಟ್ಟಿಗೆ ಸೇರಿ ಮಾಡಿದ್ದೇವೆ‌. ಕೆಲವರು ನಮ್ಮಲ್ಲಿ ಅಸಮಾಧಾನ ತರೋಕೆ ಈ ರೀತಿ ಮಾಡ್ತಿದ್ದಾರೆ. ಗೃಹ ಲಕ್ಷ್ಮೀ ಭಾಗ್ಯ ಪ್ರಣಾಳಿಕೆಗೆ ಕೆಲವರು ಎಲ್ಲಿಂದ ಹಣ ತರ್ತಿರಾ ಅಂದ್ರು, ಅದಕ್ಕೆಲ್ಲಾ ನಾವು ಉತ್ತರ ಕೊಟ್ಟಿದ್ದೇವೆ ಎಂದು ಸ್ಪಷ್ಟ ಪಡಿಸಿದರು.

ಅದಕ್ಕೆ ವರ್ಷಕ್ಕೆ 3600 ಕೋಟಿ ಹಣ ಬೇಕಾಗುತ್ತೆ. ಅದರ ಬಗ್ಗೆ ತೀರ್ಮಾನ ಮಾಡಿದ್ದೀವಿ.ನಿನ್ನೆ ಚಿತ್ರದುರ್ಗದಲ್ಲಿ 10 ಪ್ರಣಾಳಿಕೆ ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ನಾನು 8 ವರ್ಷ ಕೆಪಿಸಿಸಿ ಅಧ್ಯಕ್ಷ ಆಗಿದ್ದೆ. 224 ಕ್ಷೇತ್ರದಲ್ಲೂ ಸಹ ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಯಾರು ಅಂತ ತೀರ್ಮಾನ ಆಗ್ಬೇಕು. ನಿನ್ನೆ ಪಕ್ಷದ ಮುಖಂಡರೊಂದಿಗೆ ಸಭೆ ನಡೆಯಿತು ಎಂದರು.

Related Articles

- Advertisement -

Latest Articles