ತುಮಕೂರು: ಎಕ್ಸಿಟ್ ಪೋಲ್‌ಲ್ಲಿ ಕಾಂಗ್ರೆಸ್ ಮುಂದಿದ್ದು, ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ ಎಂದು ಮಾಜಿ ಡಿಸಿಎಂ ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ,ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ, ಕೆಲವೊಮ್ಮೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ ಎಂದರು. 2013ರಲ್ಲಿ ನಾನು 120 ಸೀಟ್ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ 122 ಸ್ಥಾನ ಬಂದಿತ್ತು. ಈಗ ನಾನು 130 ಸ್ಥಾನ ಎಂದು ಹೇಳಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯಾರು ಒಳ್ಳೆ ಆಡಳಿತ ಕೊಡುತ್ತಾರೋ ಅಂತವರನ್ನು ಹೈಕಮಾಂಡ್ ಸಿಎಂ ಮಾಡಬಹುದು. ಹೈಕಮಾಂಡ್ ನನಗೆ ಸಿಎಂ ಕೊಡುತ್ತೇನೆ ಅಂದರೆ ಬೇಡ ಅನ್ನುತ್ತೇನಾ ? ಎಂದು ಪ್ರಶ್ನಿಸಿದರು.
ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜ ಅಂತೇನಿಲ್ಲ, ಕೆಲವೊಮ್ಮೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ ಎಂದರು. ಇನ್ನು ಏನಿದ್ದರೂ ಸಂಖ್ಯೆಯ ದೃಢೀಕರಣ ಅಷ್ಟೇ ಬಾಕಿ. ನಾವು 130 ಸ್ಥಾನ ಪಡೆಯುತ್ತೇವೆ. ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.
ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿವೆ, ಸಮೀಕ್ಷೆ ಉಲ್ಟಾ ಪಲ್ಟಾ ಆಗುತ್ತೆ, ಅದನ್ನೇ ನಂಬಲು ಸಾಧ್ಯವಿಲ್ಲ ಎಂದು ಬಿಎಸ್ವೈ ಹೇಳಿದ್ದರು. ಫಲಿತಾಂಶದ ದಿನ ವಿಜಯದ ಮಾಲೆ ಯಾರ ಕೊರಳಿಗೆ ಬೀಳಲಿದೆ ಅನ್ನೋದು ಕಾದು ನೋಡಬೇಕಿದೆ.