ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಜಿ 20 ಶೃಂಗಸಭೆಯ ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪಿಎಂ ದೇವೇಗೌಡ್ರು, ಸೆಪ್ಟೆಂಬರ್ 09 ರಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮುಜಿ ಅವರು ಆಯೋಜಿಸಿರುವ ಜಿ 20 ಶೃಂಗಸಭೆಯ ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ 20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜಿ 20 ಶೃಂಗಸಭೆಯ ಭೋಜನಕೂಟದಲ್ಲಿ ಪ್ರಸ್ತುತ ಸಚಿವ ಸಂಪುಟದಲ್ಲಿರುವ ವಿದೇಶಿ ಪ್ರತಿನಿಧಿಗಳು, ಸಂಸದರು ಮತ್ತು ಸಚಿವರುಗಳಲ್ಲದೆ, ಜಿ 20 ಶೃಂಗಸಭೆಯ ಭೋಜನಕೂಟದಲ್ಲಿ ರಾಷ್ಟ್ರದ ಕೆಲವು ಮಾಜಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ಇದನ್ನೂ ಓದಿ : G20 Summit 2023 : ಸ್ಪೇನ್ ಅಧ್ಯಕ್ಷಗೆ ಕೊರೊನಾ ಪಾಸಿಟಿವ್, ಜಿ20 ಶೃಂಗಸಭೆಗೆ ಗೈರು!
ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ. ದೇವೇಗೌಡರನ್ನೂ ಜಿ20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನಿಸಲಾಗಿದೆ.
ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಸೇರಿದಂತೆ ಪ್ರಮುಖ ನಾಯಕರು ದೇಶದ ರಾಜಧಾನಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.