ಶಿವಮೊಗ್ಗ: ಜಿಲ್ಲೆಯ ಹೊಳೆಹೊನ್ನೂರು ಗ್ರಾಮದಲ್ಲಿ ಗಾಂಧಿ ಪ್ರತಿಮೆ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ತಡರಾತ್ರಿ ಬೈಕ್‌ನಲ್ಲಿ ಬಂದು ಪ್ರತಿಮೆ ಧ್ವಂಸಗೊಳಿಸಿದ್ದಾರೆ. ಬೈಕ್‌ನಲ್ಲಿ ಬಂದಿದ್ದ ಇಬ್ಬರು ಪ್ರತಿಮೆ ಧ್ವಂಸಗೊಳಿಸಿ ಪರಾರಿಯಾಗಿದ್ದಾರೆ.
ಬೆಳಗ್ಗೆ ಸುದ್ದಿ ಹರಡುತ್ತಿದ್ದಂತೆ ಸ್ಥಳದಲ್ಲಿ ಜನ ಜಮಾಯಿಸಿದ್ದರು. ಜೊತೆಗೆ ಪೊಲೀಸರು ಆರೋಪಿಗಳ ಪತ್ತೆ ಮಾಡಿ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು. ಹೀಗಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿತ್ತು.
ಇದನ್ನೂ ಓದಿ: ಕಾವೇರಿ ನೀರು ವಿವಾದ ಅರ್ಜಿ ಮುಂದಿನ ವಾರ ವಿಚಾರಣೆ; ರಾಜ್ಯ ಪರ ವಕೀಲ ಮೋಹನ್ ಕಾತರಕಿ
ಬಳಿಕ ಘಟನಾ ಸ್ಥಳಕ್ಕೆ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ ಭೇಟಿ ನೀಡಿದರು, ಈ ವೇಳೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಎಸ್‌ಪಿಗೆ ಸೂಚಿಸಿದ್ದಾರೆ. ಇವರ ಬಳಿಕ ಸಂಸದ ಬಿ.ವೈ ರಾಘವೇಂದ್ರ ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಪೊಲೀಸರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
‘ಇತ್ತ ಘಟನೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಧ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ’.
ಇದನ್ನೂ ಓದಿ: ‘ಅಧಿಕಾರ, ಹಣ ಇದ್ದರು ಮನುಷ್ಯನಿಗೆ ನೆಮ್ಮದಿ ಬೇಕು’ : ಡಿಕೆಶಿ
‘ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸುತ್ತೇವೆ. ಯಾರೊಬ್ಬರೂ ಈ ಬಗ್ಗೆ ಉದ್ವೇಗಕ್ಕೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳದೆ, ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.