ಕೊಪ್ಪಳ: ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕ್ಕೆ ಗಂಗಾವತಿ ಕ್ಷೇತ್ರದ ಕೆಲ ಕಾಂಗ್ರೆಸ್ ಮುಖಂಡರು ಸೇರ್ಪಡೆಯಾಗಿದ್ದಾರೆ. ಕುರುಬ, ಮುಸ್ಲಿಂ ಸಮುದಾಯದ ಮುಖಂಡರು ಮಾಜಿ ಸಚಿವ ಜನಾರ್ದನ ರೆಡ್ಡಿ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ, ಮಲ್ಲಿಮಾರ್ಜುನ ನಾಗಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಎಚ್ ಆರ್ ಶ್ರೀನಾಥ್ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದರಲ್ಲಿ ಅನ್ಸಾರಿ ಹಾಗೂ ಶ್ರೀನಾಥ್ ಮಧ್ಯೆ ಮಾತ್ರ ಫೈಟ್ ಇದೆ. ಇವರಿಬ್ಬರಲ್ಲಿ ಯಾರಿಗೇ ಟಿಕೆಟ್ ಸಿಕ್ಕರೂ ಸಹ ಒಬ್ಬರು ಇನ್ನೊಬ್ಬರನ್ನು ಸೋಲಿಸುವುದು ಪಕ್ಕಾ ಎನ್ನಲಾಗುತ್ತಿದೆ.ಜನಾರ್ಧನರೆಡ್ಡಿಗೆ ಕಂಬಳಿ ಹಾಕಿ ಕುರುಬ ಸಮುದಾಯ ಮುಖಂಡರು ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಬಲಗೈ ಬಂಟರಾಗಿರುವ ಇಕ್ಬಾಲ್ ಅನ್ಸಾರಿ ಅವರಿಗೆ ನಡುಕ ಹುಟ್ಟಿಸಿದ್ದಾರೆ.
ವಿಧಾನಪರಿಷತ್ ಸದಸ್ಯ ಎಚ್ ಆರ್ ಶ್ರೀನಾಥ್, ಇಕ್ಬಾಲ್ ಅನ್ಸಾರಿ ಟಿಕೆಟ್ ಗಾಗಿ ಪೈಪೋಟಿ ಏರ್ಪಟ್ಟಿದ್ದು, ಕಾಂಗ್ರೆಸ್ ಹೈಕಮಾಂಡ್ ಗಂಗಾವತಿ ಟಿಕೆಟ್ ಯಾರಿಗೆ ಕೊಡುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಇದರ ನಡುವೆ ಈಗ ಕುರುಬ ಸಮುದಾಯ ಮುಖಂಡರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರಿದ್ದಾರೆ.