ನವದೆಹಲಿ: ಜಿ-20 ಶೃಂಗಸಭೆಗೆ ನವದೆಹಲಿ ಸಜ್ಜಾಗುತ್ತಿದ್ದು, ವಿವಿಧ ರಾಷ್ಟ್ರಗಳ ನಾಯಕರ ಸಮಾಗಮಕ್ಕೆ ದಿನಗಣನೆ ಶುರುವಾಗಿದೆ. ಇನ್ನು ಈ ಬಗ್ಗೆ ಮಾತನಾಡಿರುವ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಈ ಸಭೆಗೆ ರಷ್ಯಾ ಹಾಗೂ ಚೀನಾ ಅಧ್ಯಕ್ಷರು ಬರದಿದ್ದರೂ ಜರ್ಮನಿಗೆ ಜಿ-20 ಮಹತ್ವದ್ದು ಎಂದಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಓಲಾಫ್, ರಷ್ಯಾ ಮತ್ತು ಚೀನಾದ ಅನುಪಸ್ಥಿತಿಯಲ್ಲೂ ಭಾರತದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯು ಮಹತ್ವದ್ದು. ಜಿ-20 ಶೃಂಗಸಭೆಯು ಪ್ರಮುಖ ವಿಚಾರಗಳನ್ನು ಒಳಗೊಂಡಿದೆ ಎಂದರು.
ಇದನ್ನೂ ಓದಿ: ಜಿ-20 ಶೃಂಗ ಸಭೆ : ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ ರಾಷ್ಟ್ರಪತಿ ಭವನ
ವಿಶೇಷವಾಗಿ ಬ್ರಿಕ್ಸ್ ಗೆ ಸಂಬಂಧಿಸಿದಂತೆ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ, ವಿಶ್ವಮಟ್ಟದಲ್ಲಿ ಆರ್ಥಿಕತೆಯ ಲಾಭವನ್ನು ಪಡೆಯಲಿದೆ ಎಂದು ಹೇಳಿದರು.
ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಜೋ ಬಿಡನ್ ಮುಂದಿನ ವಾರ ಭಾರತಕ್ಕೆ ತೆರಳಲಿದ್ದಾರೆ ಎಂದು ಅಲ್ಲಿನ ಮೂಲಗಳು ಹೇಳಿವೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.