Saturday, June 10, 2023
spot_img
- Advertisement -spot_img

ಮಾಜಿ ಸಚಿವ ಟಿ.ಬಿ.ಜಯಚಂದ್ರರಿಗೆ ಸಚಿವ ಸ್ಥಾನ ನೀಡಿ : ಡಾ. ಶಾಂತವೀರ ಶ್ರೀ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಿ ಎಂದು ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಡಾ. ಶ್ರೀ ಶಾಂತವೀರ ಶ್ರೀಗಳು ಆಗ್ರಹಿಸಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿ, ರಾಜ್ಯದ 12 ಜಿಲ್ಲೆಗಳಲ್ಲಿ ಕುಂಚಿಟಿಗ ಸಮುದಾಯವಿದ್ದು, ಅದರಲ್ಲೂ 4 ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯ ಹೆಚ್ಚಾಗಿ ಕಂಡುಬರುತ್ತದೆ. ಈ ಸಮುದಾಯದ ಏಕೈಕ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ನ್ಯಾಯ ಒದಗಿಸಬೇಕು ಎಂದು ಶ್ರೀಗಳು ಮನವಿ ಮಾಡಿದ್ದಾರೆ.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಅನುಭವ ರಾಜಕಾರಣಿ 7 ಬಾರಿ ಶಾಸಕರಾಗಿ, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ನೀರಾವರಿ ಇಲಾಖೆಯ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿರುತ್ತಾರೆ. ನೀರಾವರಿ ವಿಷಯಕ್ಕೆ ಸಂಬಂಧಿಸಿದಂತೆ ಅಧ್ಯಯನ ಮಾಡಿದ್ದಾರೆ. ಹೀಗಿರುವಾಗ ಇವರನ್ನು ಸಚಿವರಾಗಿ ಮಾಡಿದರೆ ಉತ್ತಮ ಹಾಗೂ ಸಾಮಾಜಿಕ ನ್ಯಾಯ ಒದಗಿಸದಂತೆ ಆಗುತ್ತದೆ ಟಿ.ಬಿ.ಜಯಚಂದ್ರ ಅವರನ್ನು ಸಚಿವರನ್ನಾಗಿ ಆಯ್ಕೆಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದಾರೆ.

Related Articles

- Advertisement -spot_img

Latest Articles