ಮೈಸೂರು : ವಕೀಲರಾಗಿರುವ ಆರ್. ಧ್ರುವನಾರಾಯಣ್ ಪುತ್ರ ದರ್ಶನ್‌ಗೆ ನಂಜನಗೂಡು ಟಿಕೆಟ್ ನೀಡಬೇಕು ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಆಗ್ರಹಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಕಾಂಗ್ರೆಸ್ ಬಲವರ್ಧನೆಗೆ ತುಂಬಾ ಶ್ರಮಿಸಿದ್ದಾರೆ. ಅವರನ್ನು ಕಳೆದುಕೊಂಡ ನೋವಿನಲ್ಲಿ ನಾವೆಲ್ಲರೂ ಇದ್ದೇವೆ, ಪುತ್ರನಿಗೆ ಟಿಕೆಟ್ ನೀಡಿ ಧ್ರುವನಾರಾಯಣ್ ಕುಟುಂಬದ ಜೊತೆ ಕಾಂಗ್ರೆಸ್ ಇದೆ ಎಂಬ ಸಂದೇಶ ರವಾನಿಸಬೇಕು ಎಂದು ಮನವಿ ಮಾಡಿದರು.
ಧ್ರುವನಾರಾಯಣ್ ಪತ್ನಿ ಕೂಡಾ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯದ ಹಿರಿಯ ನಾಯಕರು ಟಿಕೆಟ್ ನೀಡೋ ವಿಚಾರವಾಗಿ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.ಇದೀಗ ಧ್ರುವನಾರಾಯಣ ಅವರ ನಿಧನದಿಂದಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಗರು ದರ್ಶನ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ದರ್ಶನ್ ಹಾಗೂ ಅವರ ಕುಟುಂಬ ಆಸಕ್ತಿ ತೋರಿದರೆ ಮೊದಲ ಆದ್ಯತೆಯಾಗಿ ಅವರಿಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ ಎಂದು ಹೇಳಲಾಗ್ತಾ ಇದೆ.