ಮುಂಬೈ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಿಸಲಾದ ರಾಮ ಮಂದಿರ ಉದ್ಘಾಟನೆ ಬಳಿಕ ಗೋಧ್ರಾ ರೀತಿಯ ಕಹಿ ಘಟನೆ ಸಂಭವಿಸಬಹುದು ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಫೆಬ್ರವರಿ 27, 2002 ರಂದು ಗುಜರಾತ್‌ನ ಗೋಧ್ರಾ ನಿಲ್ದಾಣದಲ್ಲಿ ಅಯೋಧ್ಯೆಯಿಂದ ಸಬರಮತಿ ಎಕ್ಸ್‌ಪ್ರೆಸ್‌ನಲ್ಲಿ ವಾಪಸಾಗುತ್ತಿದ್ದ ಕರಸೇವಕರು (ರಾಮ ಮಂದಿರ ಚಳವಳಿಯಲ್ಲಿ ಭಾಗವಹಿಸಿದ ಸ್ವಯಂಸೇವಕರಿಗೆ ಸಂಘ ಪರಿವಾರ ಬಳಸಿದ್ದ ಪದ) ದಾಳಿ ನಡೆಸಿ ಅವರ ರೈಲು ಕೋಚ್‌ಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆ ರಾಜ್ಯಾದ್ಯಂತ ದೊಡ್ಡ ಪ್ರಮಾಣದ ಗಲಭೆಗೆ ಕಾರಣವಾಗಿ ಸಾವು ನೋವು ಸಂಭವಿಸಿತ್ತು.
ಇದನ್ನೂ ಓದಿ: ‘ಬಿಜೆಪಿ ವಿಷಕಾರಿ ಹಾವು..ಎಐಎಡಿಎಂಕೆ ಹಾವಿಗೆ ಆಶ್ರಯ ನೀಡುವ ಕಸ’; ಉದಯನಿಧಿ ಸ್ಟಾಲಿನ್
“ರಾಮ ಮಂದಿರ ಉದ್ಘಾಟನೆಗೆ ಸರ್ಕಾರವು ಹೆಚ್ಚಿನ ಸಂಖ್ಯೆಯ ಜನರನ್ನು ಬಸ್‌ಗಳು ಮತ್ತು ಟ್ರಕ್‌ಗಳಲ್ಲಿ ಆಹ್ವಾನಿಸುವ ಸಾಧ್ಯತೆಯಿದೆ. ಕಾರ್ಯಕ್ರಮದ ಬಳಿಕ ಅವರು ಹಿಂದಿರುಗುವ ವೇಳೆ ಗೋಧ್ರಾದಲ್ಲಿ ನಡೆದಂತಹ ಘಟನೆಯು ಸಂಭವಿಸಬಹುದು” ಎಂದು ಠಾಕ್ರೆ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಯಾಗುವ ಸಾಧ್ಯತೆ ಇದೆ. ಸದ್ಯ ದೇಶದಲ್ಲಿ ಹಲವು ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ಘೋಷಣೆಯಾಗಬೇಕಿದೆ. ಅಲ್ಲದೆ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಬೇಕಿದೆ. ಈ ನಡುವೆ ಠಾಕ್ರೆ ಇಂತಹ ಹೇಳಿಕೆ ನೀಡಿರುವುದು ಭಾರೀ ಸಂಚಲನ ಸೃಷ್ಟಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.