ಕೊಡಗು: ಆನೆ ದಾಳಿಯಿಂದ ಒಂದು ವಾರದಲ್ಲಿ ಮೂರು ಜನ ಸಾವೀಗಿಡಾಗಿದ್ದಾರೆ. ಇದು ನೋವಿನ ವಿಚಾರ. ಆನೆ-ಮಾನವ ಸಂಘರ್ಷ ತಡೆಗೆ ಸಿದ್ದರಾಮಯ್ಯ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು .
ಕೊಡಗು ಜಿಲ್ಲೆಯಲ್ಲಿ ಆನೆ ದಾಳಿಯಿಂದ ಸಾವನ್ನಪ್ಪಿದ ಕುಟುಂಬಸ್ಥರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದ ಅವರು, ರಾಜ್ಯದಲ್ಲಿ ಇಲ್ಲಿಯವರೆಗೆ ಆನೆ ದಾಳಿಯಿಂದ 25 ಜನ ಸಾವೀಗಿಡಾಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಜನ ಆನೆ ದಾಳಿಯಿಂದ ಸಾವಿಗೀಡಾಗಿದ್ದಾರೆ. ಆನೆ ಮಾನವ ಸಂಘರ್ಷ ತಡೆಯಲು ನಾವು ಕ್ರಮ ಕೈಗೊಳ್ಳುತ್ತೇವೆ. ಶಾಶ್ವತ ಕ್ರಮಕ್ಕೆ ಸರ್ಕಾರ ಮುಂದಾಗಿದ್ದು, ಕೊಡಗಿನಲ್ಲಿ ಸಾಕಷ್ಟು ಆನೆ ದಾಳಿಯಾಗಿದೆ. ಹೀಗಾಗಿ ಖುದ್ದಾಗಿ ಅದರ ಪರಿಶೀಲನೆಗೆ ಬಂದಿದ್ದು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ̤ಚೀನಿಹಡ್ಲು ಹಾಡಿ ಸಮೀಪದಲ್ಲಿ 5 ಲಿ.ಮೀ ರೈಲ್ವೆ ಕಂಬಿ ಅಳವಡಿಸುತ್ತೇವೆ ಎಂದು ಭರವಸೆ ನೀಡಿದರು.
ಇನ್ನೂ ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟ ಕೊಡಗು ಜಿಲ್ಲೆ ಸಿದ್ಧಾಪುರ ಬಳಿಯ ಬಾಡಗ-ಬಾನಂಗಾಲ ಗ್ರಾಮದ ನಿವಾಸಿ ಆಯಿಷ (63) ಪುತ್ರ ಲತೀಫ್ ಗೆ ಸಾಂತ್ವನ ಹೇಳಿದ ಸಚಿವ ಈಶ್ವರ ಖಂಡ್ರೆ, ಪರಿಹಾರದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಎ.ಎಸ್. ಪೊನ್ನಣ್ಣ , ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.