ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮೈಸೂರು ಜಿಲ್ಲಾಧಿಕಾರಿ ನಿವಾಸ ನವೀಕರಣ, ಬಟ್ಟೆ ಬ್ಯಾಗ್ ಖರೀದಿಯಲ್ಲಿ ನಿಯಮ ಉಲ್ಲಂಘನೆ ಆರೋಪಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶಿದೆ.
ರೋಹಿಣಿ ಸಿಂಧೂರಿ ಸಂಬಂಧಪಟ್ಟ ಇಲಾಖೆಯ ಅನುಮತಿ ಪಡೆಯದೆ ನಿಯಮ ಉಲ್ಲಂಘಿಸಿ ದುಡ್ಡು ಖರ್ಚು ಮಾಡಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಸಮರ್ಪಕ ದಾಖಲೆ ನೀಡಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಸಿಂಧೂರಿ ವಿರುದ್ಧ ತನಿಖೆಗೆ ನಿವೃತ್ತ ಐಎಎಸ್ ಅಧಿಕಾರಿ ಯೋಗೇಂದ್ರ ತ್ರಿಪಾಠಿ, ಬಿಬಿಎಂಪಿ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧೀನ ಕಾರ್ಯದರ್ಶಿ ಜೇಮ್ಸ್ ಥಾರಖನ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ : ಸಿಎಂ, ಡಿಸಿಎಂಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ
ರೋಹಿಣಿ ಸಿಂಧೂರಿ ಮನೆ ನವೀಕರಣ ಮಾಡಿದ್ದಾರೆ. ಮನೆಯಲ್ಲಿ ಸ್ವಿಮ್ಮಿಂಗ್ ಫೂಲ್ ಕಟ್ಟಿಸಿದ್ದಾರೆ. ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮೈಸೂರಿನ ಕೆ.ಆರ್ ನಗರ ಶಾಸಕರಾಗಿದ್ದ ಸಾ.ರಾ ಮಹೇಶ್ ಸಾಲು ಸಾಲು ಆರೋಪ ಮಾಡಿದ್ದರು. ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.