ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಇಸ್ರೋ ವಿಜ್ಞಾನಿಗಳ ತಂಡವನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಪೀಣ್ಯದಲ್ಲಿರುವ ಇಸ್ರೋ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಿದ ರಾಜ್ಯಪಾಲರು, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಅವರನ್ನು ಸನ್ಮಾನಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.


ಅಲ್ಲದೇ ಚಂದ್ರಯಾನ ಯಶಸ್ವಿಗಾಗಿ ಶ್ರಮಿಸಿದ ಇಸ್ರೋ ತಂಡದ ಸದಸ್ಯರನ್ನು ಖುದ್ದು ಭೇಟಿಯಾಗಿ, ಬೆಳ್ಳಿಯ ಪದಕ ನೀಡಿ ಗೌರವಿಸಿದರು. ಇನ್ನು ಈ ತಂಡವನ್ನು ಭೇಟಿ ಮಾಡಿ, ಶುಭ ಹಾರೈಸಲು ಪ್ರಧಾನಿ ನರೇಂದ್ರ ಮೋದಿ ಕೂಡ ನಾಳೆ ಮುಂಜಾನೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ.
ಇದನ್ನೂ ಓದಿ: ʼಕಾವೇರಿʼ ಸಮಸ್ಯೆಗೆ ʼಮೇಕೆದಾಟು ಯೋಜನೆʼಯೊಂದೇ ಪರಿಹಾರ: ಡಿಕೆಶಿ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೂ ಸಹ ಇಸ್ರೋ ವಿಜ್ಞಾನಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಅಭಿನಂದನೆಗಳನ್ನು ತಿಳಿಸಿ ಬಂದಿದ್ದರು. ಅಲ್ಲದೆ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಚಂದ್ರಯಾನ ತಂಡಕ್ಕೆ ಸನ್ಮಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.