Tuesday, March 28, 2023
spot_img
- Advertisement -spot_img

ಖರ್ಗೇಯವರಿಗೆ ಕ್ರಾಂತಿ ಮಾಡಲು ಯಾರೂ ಬೇಡ ಎಂದಿರಲಿಲ್ಲ : ಸಚಿವ ಗೋವಿಂದ ಕಾರಜೋಳ

ವಿಜಯಪುರ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಲ್ಲಿ 60 ವರ್ಷ ಕಾಂಗ್ರೆಸ್ಸಿನವರು ಆಡಳಿತ ಮಾಡಿದ್ದು,ಕಾಂಗ್ರೆಸ್ನವರು ಕಲ್ಯಾಣ ಕ್ರಾಂತಿ ಮಾಡದೆ ಜನರಿಗೆ ಮೋಸ ಮಾಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಗರ ಹೊರ ವಲಯದ ಬುರಣಾಪುರ ಬಳಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು. ಕಲ್ಯಾಣ ಕರ್ನಾಟಕದಲ್ಲಿ ಖರ್ಗೆ ಅವರು 45 ವರ್ಷ ಆಡಳಿತ ಮಾಡಿದ್ದಾರೆ. ಆಗ ಅವರಿಗೆ ಕ್ರಾಂತಿ ಮಾಡಲು ಯಾರೂ ಬೇಡ ಎಂದಿರಲಿಲ್ಲ. ಕಲಬುರಗಿಗೂ ಮೊದಲೇ ವಿಜಯಪುರದಲ್ಲಿ ಖರ್ಗೆ ವಿಮಾನ ನಿಲ್ದಾಣ ಮಾಡಲಿಲ್ಲ. ಕಲಬುರಗಿಗಿಂತಲೂ ಹೆಚ್ಚು ಮಹತ್ವ ವಿಜಯಪುರ ಜಿಲ್ಲೆಗಿದೆ. ಇದು ಐತಿಹಾಸಿಕ ಜಿಲ್ಲೆಯಾಗಿದೆ.

ಗೋಳಗುಮ್ಮಟ ಹಾಗೂ ಇತರೆ ಸ್ಮಾರಕಗಳ ವೀಕ್ಷಣೆಗೆ 200 ದೇಶಗಳ ಪ್ರವಾಸಿಗರು ಬರುತ್ತಾರೆ. ಹಾಗಾಗಿ ಇಲ್ಲಿ ಮೊದಲು ವಿಮಾನ ನಿಲ್ದಾಣ ಆಗಬೇಕಿತ್ತು ಎಂದು ಹೇಳಿದರು. ಕಾಂಗ್ರೆಸ್‌ ಅಳಿವಿನ ಅಂಚಿನಲ್ಲಿದೆ. ಅಭಿವೃದ್ಧಿಯಾಗಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಬಸವಣ್ಣನವರ ಕ್ರಾಂತಿ ಮುಂದುವರಿಸಿದ್ದರೆ ನಾವೂ ಸಂತೋಷ ಪಡುತ್ತಿದ್ದೆವು. ಆದರೆ ಕಾಂಗ್ರೆಸ್ಸಿನವರು ಕಲ್ಯಾಣ ಕ್ರಾಂತಿ ಮಾಡದೆ ಜನರಿಗೆ ಮೋಸ ಮಾಡಿದರು. ಹಿಂದುಳಿದವರ ಏಳ್ಗೆ, ಎಸ್ಸಿ, ಎಸ್ಟಿಜನರ ಕಲ್ಯಾಣ ಆಗಲಿಲ್ಲ ಎಂದರು. ಅಭಿವೃದ್ಧಿ ಮಾಡದೆ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

Related Articles

- Advertisement -

Latest Articles