ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಜೊತೆಗಿನ ವಿವಾದದ ವೇಳೆ ವರ್ಗಾವಣೆಗೊಂಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರಿಗೆ ಆರು ತಿಂಗಳ ಬಳಿಕ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ.
ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರ ಹುದ್ದೆಗೆ ನೇಮಿಸಲಾಗಿದೆ. ರೋಹಿಣಿ ಸಿಂಧೂರಿ ಮಾತ್ರವಲ್ಲದೆ, ವರ್ಗಾವಣೆಗೊಂಡ ಒಟ್ಟು 7 ಐಎಎಸ್ ಅಧಿಕಾರಿಗಳಿಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ.


ಯಾವ ಐಎಎಸ್ ಅಧಿಕಾರಿಗೆ ಯಾವ ಹುದ್ದೆ :
- ಹುದ್ದೆ ನಿಯೋಜನೆಗೆ ಕಾದಿದ್ದ ಪ್ರದೀಪ್ ಪಿ ಅವರನ್ನು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ (ಸೋಶಿಯಲ್ ಆಡಿಟ್) ನಿರ್ದೇಶಕರಾಗಿ ನಿಯೋಜಿಸಲಾಗಿದೆ.
- ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದ ಎಸ್. ವಿಕಾಶ್ ಕಿಶೋರ್ ಅವರನ್ನು ಬಿಬಿಎಂಪಿ ರಾಜರಾಜೇಶ್ವರಿ ನಗರದ ವಲಯ ಆಯುಕ್ತರಾಗಿ ನಿಯೋಜನೆ ಮಾಡಲಾಗಿದೆ.
- ಹುದ್ದೆ ನಿಯೋಜನೆ ಕಾದಿದ್ದ ಲತಾ ಕುಮಾರಿ ಅವರನ್ನು ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
- ಹುದ್ದೆ ನಿಯೋಜನೆ ಕಾದಿದ್ದ ಸಿ.ಎಸ್ ಸುದೀಂದ್ರ ಅವರನ್ನು ಕರಕುಶಲ ಮತ್ತು ಕೈಮಗ್ಗ ಇಲಾಖೆಯ ನಿರ್ದೇಶಕರ ಹುದ್ದೆಗೆ ನಿಯೋಜನೆ ಮಾಡಲಾಗಿದೆ.
- ಹುದ್ದೆ ನಿಯೋಜನೆ ಕಾದಿದ್ದ ಸಂಗಪ್ಪ ಅವರನ್ನು ಕಿಯೋನಿಸ್ಕ್ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
- ರೇಷ್ಮೆ ಸಂಶೋಧನಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾಗಿದ್ದ ಶ್ರೀರೂಪಾ ಅವರನ್ನು ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೋರೇಷನ್ ಕಾರ್ಯಕಾರಿ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.