ಮಂಡ್ಯ : ಭ್ರಷ್ಟಾಚಾರದಿಂದ ಸರ್ಕಾರ ನಡೆಯುತ್ತಿದೆ, ಇದಕ್ಕಾಗಿ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕಾಗಿದೆ ಎಂದು ಮಾಜಿ ಸಚಿವರಾದ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ನಗರದಲ್ಲಿ ಇಂದು ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಸುದ್ದಿಯವರೊಂದಿಗೆ ಮಾತನಾಡಿದ ಅಶ್ವಥ್ ನಾರಾಯಣ್, ಕಾಂಗ್ರೆಸ್ ಸರ್ಕಾರ 100ದಿನ ಪೂರೈಸಿದ ಸಮಯದಲ್ಲಿ 100 ಹಗರಣ ಮಾಡಿದೆ. ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕಿದೆ, ವರ್ಗಾವಣೆ ಹಾಗೂ ಭ್ರಷ್ಟಾಚಾರದಿಂದ ಸರ್ಕಾರ ಆಡಳಿತ ನಡೆಸುತ್ತಾ ರೈತ ವಿರೋಧಿಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆ ಎದುರಿಸಲು ಪಕ್ಷ ಸಂಘಟನೆ ಸಂಬಂಧ ಮಂಡ್ಯದಲ್ಲಿ ಸಭೆ ನಡೆಸಲಾಗ್ತಿದೆ ಎಂದರು.
ಇದನ್ನೂ ಓದಿ : ಮಂತ್ರಾಲಯಕ್ಕೆ ಭೇಟಿ ನೀಡಿದ ‘ಬ್ರಿಟನ್ ಪ್ರಧಾನಿ ರಿಷಿ ಸುನಾಕ್’ ಪೋಷಕರು
ಕಾವೇರಿ ನೀರಿನ ವಿಚಾರ ಪ್ರಸ್ತಾಪಿಸಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದೆ, ಕುಡಿಯುವ ನೀರಿಗೂ ಹಾಹಾಕಾರಾ ತಂದು ಸರ್ಕಾರ ರೈತ ವಿರೋಧಿ ನಿಲುವು ತೆಗೆದುಕೊಳ್ಳುತ್ತಿದೆ; ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಾ, ರೈತ ವಿರೋಧಿ ಹಣೆಪಟ್ಟಿಯನ್ನು ಈಗಲೂ ಮುಂದುವರೆಸುತ್ತಲೇ ಇದೆ. ನೀವು ಏನೇ ಹೇಳಿದ್ರೂ ನಾವು ಮಾಡುವ ಕೆಲಸ ಮಾಡ್ತೇವೆ ಅಂತ ಮೊಂಡುತನ ತೋರಿಸ್ತಾ ಇದೆ ಎಂದು ಗುಡುಗಿದರು.
ಕಾಂಗ್ರೆಸ್ ಸರ್ಕಾರ ಸನಾತನ ಧರ್ಮದ ಬಗ್ಗೆ ಮೊದಲಿಂದಲೂ ಹಗುರವಾಗಿ ಮಾತನಾಡುತ್ತಲೇ ಬಂದಿದೆ ಎಂದ ಅವರು, ಸನಾತನ ಧರ್ಮದ ವಿರುದ್ಧ ಯಾರೇ ಹೇಳಿಕೆ ನೀಡಿದರು ಅದಕ್ಕೆ ಕಾಂಗ್ರೆಸ್ ಮೊದಲಿನಿಂದಲೂ ಬೆಂಬಲ ಕೊಡ್ತಾನೆ ಬಂದಿದೆ, ಪ್ರತಿಯೊಂದು ವಿಚಾರದಲ್ಲೂ ಜನರಿಗೆ ಅನ್ಯಾಯ ಮಾಡ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ : ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ್ದ ಕಾಂಗ್ರೆಸ್ ವಕ್ತಾರೆಗೆ ಸಂಕಷ್ಟ
ಲೋಕಸಭಾ ಚುನಾವಣೆಯ ಬಗ್ಗೆ ವಿಚಾರ ವ್ಯಕ್ತ ಪಡಿಸಿದ ಅವರು, ದೇಶದಲ್ಲಿ ಪಕ್ಷವನ್ನು ಉಳಿಸಿಕೊಳ್ಳೊದು ಗೊತ್ತು, ಬೆಳೆಸೋದು ಗೊತ್ತು. ಎಲ್ಲಾ ಸವಾಲುಗಳನ್ನು ಸ್ವೀಕರಿಸುತ್ತಾ ಪ್ರತಿ ಕ್ಷೇತ್ರದಲ್ಲಿ ಬಿಜೆಪಿಗೆ ಶಕ್ತಿ ತುಂಬಿ, ಪಕ್ಷವನ್ನ ಮುಂದೆ ತೆಗದುಕೊಂಡು ಹೋಗುವ ಕೆಲಸ ಮಾಡ್ತೇವೆ; ಎಲ್ಲಾ ಸವಾಲುಗಳನ್ನು ಸ್ವೀಕರಿಸಿ ಕೆಲಸ ಮಾಡ್ತೀವಿ, ದೇಶದಲ್ಲಿ ಮತ್ತೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.