ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ಇನ್ಮುಂದೆ ಕನ್ನಡದಲ್ಲೇ ವ್ಯವಹರಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆ ಇದೆ. ಈ ಸಂಬಂಧ ಇನ್ನೆರಡು ದಿನಗಳಲ್ಲಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ (ಕೆಡಿಎ) ಕಾರ್ಯದರ್ಶಿ ಸಂತೋಷ ಹಾನಗಲ್ ಹೇಳಿದ್ದಾರೆ.
ಸ್ಥಳೀಯ ಭಾಷೆ ಗೊತ್ತಿಲ್ಲದ ಬ್ಯಾಂಕ್ ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ ಹಳ್ಳಿಗಳಿಂದ ಬರುವ ಅನೇಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂಬುದು ರಾಜ್ಯದ ಹೋರಾಟಗಾರರು ಸೇರಿ ಗ್ರಾಹಕರ ಆರೋಪವೂ ಆಗಿತ್ತು. ಇದಲ್ಲದೆ ಹಲವು ಕಡೆ ಕನ್ನಡ ಬಾರದ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ಗಲಾಟೆಗಳು ನಡೆಯುತ್ತಿದ್ದ ಘಟನೆಗಳು ಸಹ ವರದಿಯಾಗುತ್ತಿದ್ದವು.
ಇದನ್ನೂ ಓದಿ: ಬಿಜೆಪಿ ಜೊತೆ ಮೈತ್ರಿ ; ‘ಈ ಕ್ಷೇತ್ರ’ ನಮಗೇ ಬೇಕೆಂದು ಪಟ್ಟು ಹಿಡಿದ ಜೆಡಿಎಸ್!
ಈ ವರ್ಷದ ಮಾರ್ಚ್‌ನಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ, 2022 – ಅನ್ನು ಅಂಗೀಕರಿಸಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯನ್ನು ಉತ್ತೇಜಿಸುವುದು ಮಸೂದೆಯ ಉದ್ದೇಶಗಳಲ್ಲಿ ಒಂದಾಗಿದೆ. ರಾಜ್ಯ ಸರ್ಕಾರ, ಸ್ಥಳೀಯ ಅಧಿಕಾರಿಗಳು, ಮಂಡಳಿಗಳು, ನಿಗಮಗಳು ಮತ್ತು ಶಾಸನಬದ್ಧ ಅಥವಾ ಶಾಸನಬದ್ಧವಲ್ಲದ ಸಂಸ್ಥೆಗಳಲ್ಲಿನ ಉದ್ಯೋಗಗಳಿಗೆ ಕನ್ನಡ ಭಾಷೆಯ ಜ್ಞಾನವು ಅತ್ಯಗತ್ಯವಾಗಿರಬೇಕು ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಜಿ-20 ಶೃಂಗಸಭೆ ಔತಣಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ!
ನೂರಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಬ್ಯಾಂಕ್‌ಗಳು ‘ಕನ್ನಡ ಕೋಶ’ ಎಂಬ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಘಟಕ ಸ್ಥಾಪಿಸಿ ದೈನಂದಿನ ಕೆಲಸ ಕಾರ್ಯಗಳಲ್ಲಿ ಬಳಕೆಯಾಗುವ ಕನ್ನಡ ಜ್ಞಾನವನ್ನು ಕಲಿಸುವ ಯತ್ನ ಮಾಡಬೇಕು. ಕನ್ನಡೇತರ ಉದ್ಯೋಗಿಗಳಿಗಾಗಿ ಬ್ಯಾಂಕ್‌ಗಳು ‘ಕನ್ನಡ ಕಲಿಕಾ ಘಟಕ’ ಸ್ಥಾಪಿಸಬೇಕು ಮತ್ತು ಸರ್ಕಾರವು ಇದಕ್ಕಾಗಿ ಅಗತ್ಯ ಬೋಧಕ ಸಿಬ್ಬಂದಿ ಮತ್ತು ಅಧ್ಯಯನ ಸಾಮಗ್ರಿಗಳನ್ನು ನೀಡಲಿದೆ ಎಂದು ಮಸೂದೆಯಲ್ಲಿ ತಿಳಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.