ಬೆಂಗಳೂರು: ಗೂಡ್ಸ್ ಸಾಗಾಣಿಕೆ ಟ್ರಕ್‌ಗಳಿಗೆ ಲೈಫ್ ಟೈಂ ಟ್ಯಾಕ್ಸ್ ಪಾವತಿಗೆ ಸರ್ಕಾರ ಆದೇಶ ಹೊರಡಿಸಿರುವುದನ್ನು ವಿರೋಧಿಸಿ ಲಾರಿ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಸಂಜೆಯೊಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯದಾದ್ಯಂತ ರಸ್ತೆ ತಡೆದು ಮುಷ್ಕರ ನಡೆಸಲಾಗುವುದು ಎಂದಿದ್ದಾರೆ.
ಈ ನಡುವೆ ಟ್ರಕ್ ಮಾಲೀಕರ ಸಮಸ್ಯೆ ಬಗ್ಗೆ ಚರ್ಚಿಸಲು ಸಾರಿಗೆ ಇಲಾಖೆ ಆಯುಕ್ತರು ಹಾಗೂ ಸೆಕ್ರೆಟರಿ ತೆರಳಿದ್ದಾರೆ. ವಿಧಾನಸೌಧಕ್ಕೆ ತೆರಳಿರುವ ಅಧಿಕಾರಿಗಳು ಅಲ್ಲಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಹೀಗಾಗಿ ಅಧಿಕಾರಿಗಳು ವಾಪಸಾಗುವವರೆಗೂ ಆರ್‌ಟಿಓ ಕಚೇರಿ ಬಿಟ್ಟು ತೆರಳವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಇದನ್ನೂ ಓದಿ: ʼಶಿವಮೊಗ್ಗದಲ್ಲಿ ಅಭಿವೃದ್ಧಿಯ ವಿನೂತನ ಅಧ್ಯಾಯ ಆರಂಭವಾಗಿದೆ ́
ಈಗಾಗಲೇ ಶಾಂತಿನಗರದಲ್ಲಿ 250ಕ್ಕೂ ಹೆಚ್ಚು ಎಂಜಿವಿ (ಮೀಡಿಯಂ ಗೂಡ್ಸ್ ವೆಹಿಕಲ್ ) ವಾಹನಗಳನ್ನು ನಿಲ್ಲಿಸಿದ್ದು, ಇನ್ನಷ್ಟು ವಾಹನಗಳನ್ನು ಪ್ರತಿಭಟನಾ ಸ್ಥಳಕ್ಕೆ ತರುವ ಸಾಧ್ಯತೆ ಇದೆ. ಶಾಂತಿನಗರ ಬಸ್ ನಿಲ್ದಾಣದ ಬಳಿಯ ಬಿಟಿಎಸ್ ರಸ್ತೆಯನ್ನು ಬ್ಲಾಕ್ ಮಾಡಿದ್ದು, ಸಮಸ್ಯೆ ಬಗೆಹರಿಯದಿದ್ರೆ ಗಾಡಿಗಳನ್ನ ತೆಗೆಯೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
‘ಬೆಂಗಳೂರಿನಲ್ಲಿ 6 ಸಾವಿರಕ್ಕೂ ಹೆಚ್ಚು ಗೂಡ್ಸ್ ವಾಹನಗಳಿವೆ. ರಾಜ್ಯಾದ್ಯಂತ 6 ಲಕ್ಷಕ್ಕೂ ಹೆಚ್ಚು ವಾಹನಗಳಿವೆ. ನಾಳೆಯಿಂದ ಪ್ರತಿ ಆರ್‌ಟಿಒ ಕಚೇರಿ ಮುಂದೆ ವಾಹನಗಳನ್ನ ನಿಲ್ಲಿಸುತ್ತೇವೆ. ಸಮಸ್ಯೆ ಬಗೆಹರಿಸುವ ಬಗ್ಗೆ ಇಂದೇ ನಿರ್ಧಾರವಾಗಬೇಕು; ಇಂದು 10.30ಕ್ಕೆ ಸಭೆ ಇದೆ, ಆ ಬಳಿಕ ನಿರ್ಧಾರ ತಿಳಿಸುತ್ತೇವೆ’ ಎಂದು ಲಾರಿ ಮಾಲೀಕರು ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ‘ನನಗೆ ನೋಟಿಸ್ ಕೊಟ್ಟಿದ್ದಾರೆ, ಅದಕ್ಕೆ ಸಭೆಗೆ ಹೋಗಿಲ್ಲ’
ಗೂಡ್ಸ್ ಟ್ರಕ್ ಮಾಲೀಕರ ಪ್ರತಿಭಟನೆಯಿಂದ ಶಾಂತಿನಗರ ಬಸ್ ನಿಲ್ದಾಣದ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ಆರ್‌ಟಿಒ ಆಯುಕ್ತರ ಕಚೇರಿ ಮುಂಭಾಗ ಮಾಲೀಕರು ಜಮಾಯಿಸಿದ್ದು, ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಪೊಲೀಸರು ಅಲರ್ಟ್ ಆಗಿದ್ದಾರೆ. ಶಾಂತಿನಗರ ಆರ್‌ಟಿಒ ಕಚೇರಿಗೆ ಪೊಲೀಸ್ ಬಿಗಿಭದ್ರತೆ ನೀಡಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.