ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ನೋಂದಣಿಯು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ನೋಂದಾಯಿತ ಫಲಾನುಭವಿಗಳಿಗೆ ಡಿಬಿಟಿ ಪಾವತಿಯಾಗುತ್ತಿದ್ದು, ಈ ಹಿನ್ನೆಲೆ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈಗಾಗಲೇ ನೋಂದಣಿ ಮಾಡಿಕೊಂಡಿರುವ ಫಲಾನುಭವಿಗಳ ಖಾತೆಗೆ ಹಣ ಹಾಕುವಲ್ಲಿ ಗೊಂದಲ ಆಗದಿರಲಿ ಎಂದು ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಬಂದಿದೆ. ನೋಂದಣಿಯಾಗಿರುವ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾ ಆದ ಬಳಿಕ ಮತ್ತೆ ಹೊಸ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ‘ಬೆಳಗ್ಗೆ ಎದ್ದಾಗ ಲಕ್ಷ್ಮಿ ಶ್ಲೋಕ, ಮಲಗುವಾಗ ಹನುಮನ ಶ್ಲೋಕ ಹೇಳ್ತೀನಿ’
ಗೃಹಲಕ್ಷ್ಮಿ ಯೋಜನೆಗೆ ಈವರೆಗೆ 1.13 ಕೋಟಿ ಮಂದಿ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ17 ಲಕ್ಷ ಫಲಾನುಭವಿಗಳು ಆಧಾರ್ ಅಪ್ಡೇಟ್ , ಬ್ಯಾಂಕ್ ಅಕೌಂಟ್ ಲಿಂಕ್ ಹಾಗೂ ಕೆವೈಸಿ ಅಪ್ಡೇಟ್ ಮಾಡಿಸಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಮೊದಲ ಕಂತಿನ ಹಣ ಜಮಾವಣೆಯಲ್ಲಿ ತಡವಾಗಿದ್ದರಿಂದ ಹೊಸ ನೋಂದಣಿಗೆ ತಾತ್ಕಾಲಿಕ ತಡೆ ನೀಡಲಾಗಿದೆ.
ಆಸಗ್ಟ್ 30ರಂದು ಚಾಲನೆಗೊಂಡಿದ್ದ ಯೋಜನೆ
ಕಳೆದ ಆಗಸ್ಟ್ 30ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ್ದರು. ಈ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 10 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಡಿಜಿಟಲ್ ಕಾರ್ಡ್ ವಿತರಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.